ನವದೆಹಲಿ: ನೂತನ ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಸರ್ವಧರ್ಮೀಯರ ಸಮ್ಮಿಲನವು ವಿಶೇಷವಾಗಿ ಗಮನ ಸೆಳೆಯಿತು.
ಇದು ನಿಜ.ನೂತನ ಸಂಸತ್ ಭವನ ಉದ್ಘಟನಾ ಕಾರ್ಯಕ್ರಮದ ಅಂಗವಾಗಿ ಪೂಜಾ ಕೈಂಕರ್ಯಗಳು ಬೆಳಗ್ಗೆ 7.30 ರಿಂದ ಆರಂಭವಾಗಿ ಪೂಜಾ-ವಿಧಿವಿಧಾನಗಳು ನಡೆದವು.
ವಿವಿಧ ಧರ್ಮದ ಮುಖಂಡರು ಪ್ರಾರ್ಥನೆ ಸಲ್ಲಿಸುವ ಮೂಲಕ ಸೌಹಾರ್ದತೆಯ ಸಂದೇಶವನ್ನು ಸಾರಿದರು.
ಪ್ರಾರ್ಥನಾ ಸಭೆಯಲ್ಲಿ ಪಂಡಿತರು, ಸಾಧು-ಸಂತರು ಭಾಗಿಯಾಗಿದ್ದು, 12 ಮಂದಿ ಧಾರ್ಮಿಕ ನಾಯಕರಿಂದ ಪ್ರಾರ್ಥನೆ ನಡೆಯಿತು ಈ ಮಧ್ಯೆ ಕಾರ್ಮಿಕರಿಗೆ ಶಾಲು ಹೊದಿಸಿ ಪ್ರಧಾನಿಯವರು ಸನ್ಮಾನಿಸಿದರು.
ಕಾರ್ಯಕ್ರಮಕ್ಕೆ ಸುಮಾರು 60 ಧಾರ್ಮಿಕ ಮುಖ್ಯಸ್ಥರನ್ನು ಕರೆಸಲಾಗಿದ್ದು, ಅವರಲ್ಲಿ ಹಲವರು ತಮಿಳುನಾಡಿನವರು.ಧಾರ್ವಿಕ ಕಾರ್ಯಕ್ರಮದಲ್ಲಿ ಶೃಂಗೇರಿ ಶ್ರೀ ಶಾರದಾ ಪೀಠದ ಋತ್ವಿಜರಾದ ಟಿ.ವಿ. ಸೀತಾರಾಮ ಶರ್ಮ, ಶ್ರೀರಾಮ ಶರ್ಮ, ಲಕ್ಷ್ಮೀಶ ತಂತ್ರಿ ಹಾಗೂ ದೆಹಲಿ ಶಾಖಾ ಮಠದ ನಾಗರಾಜ ಅಡಿಗ, ಋಷ್ಯಶೃಂಗ ಭಟ್ ಭಾಗಿಯಾಗಿದ್ದಾರೆ.

