ಕೊಟ್ಟ‌ ಮಾತಿನಂತೆ‌ ಗ್ಯಾರಂಟಿ ಯೋಜನೆಗಳು  ಜಾರಿ -ಡಿ.ಕೆ. ಶಿ ಭರವಸೆ

ಬೆಂಗಳೂರು: ನಾವು ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು  ಜಾರಿ ಮಾಡುತ್ತೇವೆ ಎಂದು ಉಪ‌ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ‌ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಿಕೆಶಿ, ಮುಖ್ಯಮಂತ್ರಿಗಳು ಹಣಕಾಸು ಸಚಿವಾಲಯ ಜವಾಬ್ದಾರಿ ಹೊತ್ತಿದ್ದಾರೆ‌ ಅವರು ಈಗಾಗಲೇ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ ಎಂದು ತಿಳಿಸಿದರು.

ಜೂನ್ 1ರಂದು ಸಚಿವ ಸಂಪುಟ ಸಭೆ ಕರೆಯಲಾಗಿದ್ದು, ಈ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಹೇಳಿದರು.

ನಮ್ಮದು ಜವಾಬ್ದಾರಿಯುತ ಸರ್ಕಾರ, ನಾವು ಈ ಯೋಜನೆಯನ್ನು ಕ್ರಮಬದ್ಧವಾಗಿ ಜಾರಿ ಮಾಡುತ್ತೇವೆ ಎಂದು ಡಿಕೆಶಿ ಭರವಸೆ ನೀಡಿದರು.

ಯುವಕರು, ಮಹಿಳೆಯರಿಗೆ ಕೊಟ್ಟಿರುವ ಮಾತು ಉಳಿಸಿಕೊಳ್ಳುತ್ತೇವೆ. ಎಲ್ಲಾ ಇಲಾಖೆ ಅಧಿಕಾರಿಗಳ ಜೊತೆ ಸಭೆ ಮಾಡುತ್ತಿದ್ದು, ನಾನು ಕೂಡ ನನ್ನ ಸಚಿವಾಲಯಗಳ ಅಧಿಕಾರಿಗಳ ಸಭೆ ಮಾಡುತ್ತಿದ್ದೇನೆ ಎಂದು ಉಪ ಮುಖ್ಯಮಂತ್ರಿ ಹೇಳಿದರು.