ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ಸುತ್ತಿನ ಧರ್ಮ ದಂಗಲ್ ಗೆ ಕಾಂಗ್ರೆಸ್ ಸರ್ಕಾರ ಮುಂದಾಗಿದೆ.
ಸರ್ಕಾರ ಆಪರೇಷನ್ ಪಠ್ಯ ಪುಸ್ತಕ ಮಾಡಲು ಹೊರಟಿರುವುದು ಇದಕ್ಕೆ ಕಾರಣ.
ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಈ ಬಗ್ಗೆ ಮಾತನಾಡಿದ್ದು, ಪಠ್ಯ ಪುಸ್ತಕ ಪರಿಷ್ಕರಣೆ ಮಾಡುತ್ತೇವೆ ಎಂದು ಹೇಳಿದ್ದಾರೆ.
ಪ್ರಣಾಳಿಕೆಯಲ್ಲಿ ಕೊಟ್ಟ ಮಾತಿನಂತೆ ಪರಿಷ್ಕರಣೆ ಮಾಡುತ್ತೇವೆ. ಮಕ್ಕಳ ಮನಸ್ಸಿನಲ್ಲಿ ಕಲ್ಮಶ ತುಂಬುವ ಪಠ್ಯ ಕೈ ಬಿಡಲಾಗುವುದು ಈ ಬಗ್ಗೆ ಸಿಎಂ, ಡಿಸಿಎಂ ಜೊತೆ ಚರ್ಚಿಸಿ ಕಾನೂನು ಅಭಿಪ್ರಾಯ ಪಡೆದು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಹಿಜಬ್ ವಿಚಾರ ಕೋರ್ಟ್ ನಲ್ಲಿ ಇದೆ. ಲೀಗಲ್ ಒಪಿನಿಯನ್ ಪಡೆದು ನಂತರ ಮಾತನಾಡುತ್ತೇನೆ ಎಂದು ತಿಳಿಸಿದ್ದಾರೆ.
ಮೇ 31ರಿಂದ ಶಾಲೆ ಪ್ರಾರಂಭವಾಗಲಿದ್ದು, ಶಿಕ್ಷಣ ಇಲಾಖೆ ಸಿದ್ಧವಾಗಿದೆ. ಮಕ್ಕಳು ಖುಷಿಯಿಂದ ಶಾಲೆಗೆ ಬರಬೇಕೆಂದು ಎಂದು ಮಧು ಬಂಗಾರಪ್ಪ ಮನವಿ ಮಾಡಿದ್ದಾರೆ.
ಒಟ್ಟಿನಲ್ಲಿ ಸಾಹಿತಗಳ ಮನವಿ ಬೆನ್ನಲ್ಲೇ ಪಠ್ಯಪುಸ್ತಕ ಪರಿಷ್ಕರಣೆಗೆ ಸಿದ್ದರಾಮಯ್ಯ ಸರ್ಕಾರ ಚಾಲನೆ ಕೊಟ್ಟಿದೆ.

