ಮೈಸೂರು: ಗ್ಯಾರಂಟಿ ಯೋಜನೆಗಳಿಗೆ ಷರತ್ತು ಹಾಕುವ ಮೂಲಕ ರಾಜ್ಯ ಸರ್ಕಾರ ಜನರನ್ನು ಗೊಂದಲಕ್ಕೆ ದೂಡಿದೆ ಎಂದು ಶಾಸಕ ಬಿ.ವೈ ವಿಜಯೇಂದ್ರ ಟೀಕಿಸಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ವಿಜಯೇಂದ್ರ ಗ್ಯಾರಂಟಿ ಯೋಜನೆಗಳ ಜಾರಿ ವಿಚಾರದಲ್ಲಿ ಷರತ್ತು ಹಾಕಬಾರದು ಎಂದು ಸಲಹೆ ನೀಡಿದರು.
ಈಗಾಗಲೇ ವಿದ್ಯುತ್ ಬಿಲ್ ಹೆಚ್ಚಳ ಮಾಡಿದ್ದಾರೆ. ಗ್ಯಾರಂಟಿ ಜಾರಿ ಮಾಡಲು ಹೆಚ್ಚು ತೆರಿಗೆ ವಿಧಿಸುತ್ತಿದ್ದಾರೆ.
ಗ್ಯಾರಂಟಿ ಕಾರ್ಡ್ ಒಂದು ಕಡೆ ಮತ್ತೊಂದು ಕಡೆ ಗ್ರಾಹಕರಿಗೆ ಪೆಟ್ಟು.ಇದನ್ನೆಲ್ಲ ಬಿಜೆಪಿ ಕಾದು ನೋಡುತ್ತಿದೆ, ಜವಾಬ್ದಾರಿಯುತ ಪ್ರತಿಪಕ್ಷವಾಗಿ ಹೋರಾಟ ಮಾಡುತ್ತೇವೆ ಎಂದು ಹೇಳಿದರು.
ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ಏನೇನು ಆಶ್ವಾಸನೆ ಕೊಟ್ಟಿದ್ದರು ಅವುಗಳ ಈಡೇರಿಕೆಗೆ ಜನರು ನೀರಿಕ್ಷೆಯಲ್ಲಿದ್ದಾರೆ.
ಆದರೆ ಇವರು ಗ್ಯಾರಂಟಿ ಯೋಜನೆಗಳಿಗೆ ಷರತ್ತು ವಿಧಿಸುತ್ತಿದ್ದಾರೆ ಇದು ಸರಿಯಲ್ಲ ಎಂದು ವಿಜಯೇಂದ್ರ ಹೇಳಿದರು.

