ಬೆಂಗಳೂರು: ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತಿರುವ ಸರ್ಕಾರ ಇದೀಗ ಮದ್ಯಪ್ರಿಯರಿಗೆ ಶಾಕ್ ನೀಡಿದೆ.
ಸರ್ಕಾರ ಮದ್ಯದ ದರವನ್ನ ಹೆಚ್ಚಳ ಮಾಡಿದೆ.
ಮದ್ಯದ ಪ್ರತಿ ಬಾಟಲ್ ಗೆ ರೂ.10 ರಿಂದ 20ರವರೆಗೆ ಹೆಚ್ಚಳವಾಗಿದ್ದು, ಬಿಯರ್ ಸೇರಿದಂತೆ ಹಾರ್ಡ್ ಡ್ರಿಂಕ್ಸ್‌ಗಳ ಬೆಲೆಯಲ್ಲಿ ಏರಿಕೆಯಾಗಿದೆ.
ಬಡ್ ವೈಸರ್ ಬಿಯರ್ ದರ ರೂ.198 ರಿಂದ 220ಕ್ಕೆ ಹೆಚ್ಚಳವಾಗಿದ್ದು, ಕಿಂಗ್ ಫಿಶರ್ ಬಿಯರ್ ದರವನ್ನು ರೂ.160ರಿಂದ 170ಕ್ಕೆ ಏರಿಕೆಯಾಗಿದೆ. ಯುಬಿ ಪ್ರೀಮಿಯಂ ದರ ರೂ.125ರಿಂದ 135, ಸ್ಟ್ರಾಂಗ್ ದರ ರೂ.130ರಿಂದ 135ಗೆ ಹೆಚ್ಚಳವಾಗಿದೆ.

