ಬೆಂಗಳೂರು: ಸಚಿವ ಸ್ಥಾನದಿಂದ ವಂಚಿತರಾಗಿ ಬಿಡಿಎ ಅಧ್ಯಕ್ಷ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದ ಶಾಸಕರುಗಳಿಗೆ ರಾಜ್ಯ ಸರ್ಕಾರ ಸರಿಯಾಗಿ ಶಾಕ್ ನೀಡಿದೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಐಎಎಸ್ ಅಧಿಕಾರಿ ರಾಕೇಶ್ ಸಿಂಗ್ ಅವರನ್ನ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸಚಿವ ಸ್ಥಾನ ಸಿಗದ ಹಿನ್ನೆಲೆ ಬಿಡಿಎ ಅಧ್ಯಕ್ಷ ಸ್ಥಾನಕ್ಕಾಗಿ ಶಾಸಕರಾದ ಹ್ಯಾರಿಸ್, ಎಂ.ಕೃಷ್ಣಪ್ಪ ಲಾಬಿ ನಡೆಸುತ್ತಿದ್ದರು.
ಆದರೆ ರಾಜಕಾರಣಿಗಳಿಗೆ ಮಣೆ ಹಾಕದ ಸರ್ಕಾರ ಐಎಎಸ್ ಅಧಿಕಾರಿ ರಾಕೇಶ್ ಸಿಂಗ್ ಅವರನ್ನ ನೇಮಕ ಮಾಡಿದೆ.

