ಬೆಂಗಳೂರು: ಬೆಂಗಳೂರಿನ ಶಿವರಾಮ ಕಾರಂತ ಲೇಔಟ್ ಕಾಮಗಾರಿ ಮುಂದುವರಿಸಲು ನ್ಯಾಯಮೂರ್ತಿ ನಜೀರ್ ಅವರು ಆದೇಶಿಸಿದ್ದು,ಪ್ರಮುಖರೊಂದಿಗೆ ಚರ್ಚಿಸಿದ್ದೇನೆ ಎಂದು ಉಪ ಮುಖ್ಯಮಂತ್ರಿ ಡ.ಕೆ.ಶಿವಕುಮಾರ್ ತಿಳಿಸಿದರು.
ಈ ಯೋಜನೆ ಕುರಿತು ನ್ಯಾಯಮೂರ್ತಿಗಳಾದ ಚಂದ್ರಶೇಖರ್, ರಮೇಶ್ ಹಾಗೂ ಬೆಂಗಳೂರು ನಗರಾಭಿೃದ್ಧಿ ಕಾರ್ಯದರ್ಶಿಗಳು, ಬಿಡಿಎ ಮುಖ್ಯಸ್ಥರ ಜೊತೆ ಚರ್ಚೆ ಮಾಡಿದ್ದೇನೆ ಎಂದು ಹೇಳಿದರು.
ಬಿಡಿಎ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,ಈ ಲೇಔಟ್ ಯೋಜನೆ, ಕಾಮಗಾರಿ ಪ್ರಗತಿ ಕುರಿತು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದರು.
ಈ ಯೋಜನೆಯಲ್ಲಿ ಜಮೀನು ಕಳೆದುಕೊಂಡವರಿಗೆ ಸೂಕ್ತ ಪರಿಹಾರ ಸಿಗಬೇಕು. ಬಿಡಿಎ ಗೂ ಪ್ರಯೋಜನ ಆಗಬೇಕು ಎಂಬುದು ನಮ್ಮ ಉದ್ದೇಶ ಎಂದು ಹೇಳಿದರು.
ಕಂದಾಯ ನಿವೇಶನಕ್ಕೆ ಅರ್ಜಿ ಹಾಕಿರುವ ಬಡವರಿಗೆ ಅನ್ಯಾಯ ಆಗಬಾರದು, ಕಾನೂನು ಚೌಕಟ್ಟಿನಲ್ಲಿ ಎಲ್ಲರ ರಕ್ಷಣೆ ಮಾಡುವ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದು ಡಿಕೆಶಿ ತಿಳಿಸಿದರು.
ಮಳೆಗಾಲ ಆರಂಭವಾಗುತ್ತಿದ್ದು, ಎಲ್ಲೆಲ್ಲಿ ನೀರು ನಿಲ್ಲುತದೆಯೋ ಅಂತಹ ಅತ್ಯಂತ ಪ್ರಮುಖ ಪ್ರದೇಶಗಳಿಗೆ ಇಂದು ಭೇಟಿ ನೀಡುತ್ತಿದ್ದೇನೆ.
ಮಳೆ ಬಂದಾಗ ಸಮಸ್ಯೆ ಎದುರಾದರೆ ಅದನ್ನು ನಿಭಾಯಿಸಲು ಯಾವ ಕಾರ್ಯಯೋಜನೆ ರೂಪಿಸಿದ್ದಾರೆ ಎಂಬುದರ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ.
ಮಳೆ ಬಂದಾಗ ಸಮಸ್ಯೆ ಉಂಟಾಗಿ ಬೆಂಗಳೂರು ನಗರಕ್ಕೆ ಕೆಟ್ಟ ಹೆಸರು ಬರಬಾರದು ಎಂದು ಆ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡುತ್ತೇನೆ ಉಪ ಮುಖ್ಯಮಂತ್ರಿ ತಿಳಿಸಿದರು.

