ಬೆಂಗಳೂರು: ನಟ ಅರ್ಜುನ್ ಸರ್ಜಾ ವಿರುದ್ಧದ ಮೀಟೂ ಪ್ರಕರಣ ಸಂಬಂಧ ಸಾಕ್ಷ್ಯಾಧಾರ ಸಲ್ಲಿಸುವಂತೆ ನಟಿ ಶೃತಿ ಹರಿಹರನ್ ಗೆ ಬೆಂಗಳೂರಿನ 8ನೇ ಎಸಿಎಂಎಂ ಕೋರ್ಟ್ ನೋಟಿಸ್ ನೀಡಿದೆ.
2018ರಲ್ಲಿ ನಟ ಅರ್ಜುನ್ ಸರ್ಜಾ ವಿರುದ್ಧ ಶೃತಿ ಹರಿಹರನ್ ಮೀಟೂ ಆರೋಪ ಮಾಡಿದ್ದರು.
ಈ ಸಂಬಂಧ ಪ್ರಕರಣ ದಾಖಲಾಗಿ ಪೊಲೀಸರು ತನಿಖೆ ಮಾಡಿ ಬಿ ರಿಪೋರ್ಟ್ ಸಲ್ಲಿಸಿದ್ದರು.
ಬಿ ರಿಪೋರ್ಟ್ ಪ್ರಶ್ನಿಸಿ ನಟಿ ಶೃತಿಹರಿಹರನ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಈ ಸಂಬಂಧ ವಿಚಾರಣೆ ನಡೆಸಿದ ಬೆಂಗಳೂರಿನ 8ನೇ ಎಸಿಎಂಎಂ ಕೋರ್ಟ್, ಪೊಲೀಸರಿಗೆ ಸೂಕ್ತ ಸಾಕ್ಷ್ಯಾಧಾರ ಸಲ್ಲಿಸುವಂತೆ ಶೃತಿ ಹರಿಹರನ್ ಗೆ ನೋಟಿಸ್ ಜಾರಿ ಮಾಡಿದೆ.

