ಬಸ್ ಕಂಡಕ್ಟರ್ ಆಗಲಿದ್ದಾರೆ ಸಿಎಂ ಸಿದ್ದು

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿಗೆ ಜೂನ್ 11 ರಂದು  ಚಾಲನೆ ಸಿಗಲಿದ್ದು ಅಂದು ಸ್ವತಃ ಸಿಎಂ ಸಿದ್ದರಾಮಯ್ಯ ಕಂಡಕ್ಟರ್ ಆಗಲಿದ್ದಾರೆ.

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣದ ಅವಕಾಶ ನೀಡುವ ಶಕ್ತಿ ಯೋಜನೆಗೆ ಇದೇ ಭಾನುವಾರ ಸಿದ್ಧರಾಮಯ್ಯ ಚಾಲನೆ ನೀಡಲಿದ್ದಾರೆ.

ಮೆಜೆಸ್ಟಿಕ್‌ನಿಂದ ನಾಡಿನ ಶಕ್ತಿಕೇಂದ್ರವಾದ ವಿಧಾನಸೌಧಕ್ಕೆ ತೆರಳುವ ರೂಟ್‌ ನಂ.43 ಬಸ್‌ನಲ್ಲಿ ಕಂಡಕ್ಟರ್‌ ಮಾದರಿಯಲ್ಲಿ ಟಿಕೆಟ್‌ ವಿತರಿಸುವ ಮೂಲಕ ಈ ಯೋಜನೆಗೆ  ಸಿದ್ಧರಾಮಯ್ಯ ಚಾಲನೆ ನೀಡಲಿರುವುದು ವಿಶೇಷ.