ಬೆಂಗಳೂರು: ಬಿಜೆಪಿಗೆ ಸೆಡ್ಡು ಹೊಡೆದು ಬೇರೆ ಪಕ್ಷಕಟ್ಟಿ ಚುನಾವಣೆಯಲ್ಲಿ ಸ್ಪರ್ಧಿಸಿ ಬೀಗುತ್ತಿದ್ದ ಶಾಸಕ ಜನಾರ್ಧನರೆಡ್ಡಿಗೆ ಇದೀಗ ಸಂಕಷ್ಟ ಎದುರಾಗಿದೆ.
ಶಾಸಕ ಜನಾರ್ಧನರೆಡ್ಡಿ ಮತ್ತು ಪತ್ನಿ ಲಕ್ಷ್ಮೀ ಅರುಣಾರೆಡ್ಡಿ ಅವರಿಗೆ ಚುನಾವಣೆಯೇ ಮುಳುವಾಯಿತೇನೋ
ಇವರಿಬ್ಬರ ಆಸ್ತಿ ಜಪ್ತಿ ಮಾಡುವಂತೆ ಸಿಬಿಐ ವಿಶೇಷ ಕೋರ್ಟ್ ಆದೇಶಿಸಿದೆ.
ಕ್ರಿಮಿನಲ್ ಕೇಸ್ ಮುಗಿಯುವವರೆಗೆ ಒಟ್ಟು 77 ಆಸ್ತಿಗಳನ್ನು ಜಪ್ತಿ ಮಾಡುವಂತೆ ಸಿಬಿಐ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ.
ಜನಾರ್ದನ ರೆಡ್ಡಿ ದಂಪತಿಗೆ ಸೇರಿದ ಒಟ್ಟು 124 ಆಸ್ತಿಗಳನ್ನು ಜಪ್ತಿ ಮಾಡಲು ಅನುಮತಿ ಕೋರಿ ಸಿಬಿಐ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು.
ಇದೀಗ ನ್ಯಾಯಾಲಯ ಭ್ರಷ್ಟಾಚಾರ ತಡೆ ಕಾಯ್ದೆ, ಕ್ರಿಮಿನಲ್ ಲಾ ತಿದ್ದುಪಡಿ ಕಾಯ್ದೆಯಡಿಯಲ್ಲಿ ಒಟ್ಟು 77 ಆಸ್ತಿಗಳನ್ನು ಜಪ್ತಿ ಮಾಡುವಂತೆ ಸೂಚಿಸಿದೆ.

