ಕಲಬುರಗಿ: ಅಕ್ರಮ ಮರಳು ದಂಧೆ ತಡೆಯಲು ಹೋಗಿದ್ದ ಕಾನ್ಸ್ ಟೇಬಲ್ ಮೇಲೆ ದಂದೆ ಕೋರರು ಟ್ರ್ಯಾಕ್ಟರ್ ಹತ್ತಿಸಿ ಹತ್ಯೆ ಮಾಡಿರುವ ಹೇಯ ಘಟನೆ ಕಲ್ಬುರ್ಗಿಯಲ್ಲಿ ನಡೆದಿದೆ.
ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನಾರಾಯಣಪುರ ಬಳಿ ಈ ಘಟನೆ ನಡೆದಿದ್ದು, ಮೈಸೂರ್ ಚೌಹಾಣ್ (51) ಹತ್ಯೆಯಾಗಿರುವ ಹೆಡ್ ಕಾನ್ಸ್ಟೇಬಲ್.
ಅಕ್ರಮ ಮರಳು ಸಾಗಣೆ ಹಿನ್ನೆಲೆಯಲ್ಲಿ ಗುರುವಾರ ರಾತ್ರಿ ಮೈಸೂರ್ ಚೌಹಾಣ್ ತಪಾಸಣೆಗೆ ಬೈಕ್ ನಲ್ಲಿ ಹೋಗಿದ್ದರು.
ಆಗ ದುಷ್ಕರ್ಮಿಗಳು ಮೈಸೂರ್ ಚೌಹಾಣ್ ಮೇಲೆ ಟ್ರ್ಯಾಕ್ಟರ್ ಹರಿಸಿದ್ದು,ಟ್ರ್ಯಾಕ್ಟರ್ ಚಕ್ರಕ್ಕೆ ಸಿಲುಕಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೈಸೂರ್ ಚೌಹಾನ್ ಅವರು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಚೌಡಾಪೂರ್ ತಾಂಡಾ ನಿವಾಸಿ.
ನೆಲೋಗಿ ಠಾಣೆಯಲ್ಲಿ ಹೆಡ್ ಕಾನ್ ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಈ ಕುರಿತು ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಒಬ್ಬ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.