ಬೆಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ: ಬೊಮ್ಮಾಯಿ, ಆರ್.ಅಶೋಕ್ ಪೊಲೀಸ್ ವಶಕ್ಕೆ

ಬೆಂಗಳೂರು: ಚುನಾವಣೆಗೂ ಮೊದಲು ಘೋಷಿಸಿದಂತೆ ಜನತೆಗೆ ಗ್ಯಾರಂಟಿ ಯೋಜನೆಯ 10 ಕೆಜಿ ಅಕ್ಕಿ ನೀಡುವಂತೆ ಆಗ್ರಹಿಸಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದರು.

ಬೆಂಗಳೂರಿನಲ್ಲಿ‌ ಮಳೆಯ ನಡುವೆಯೇ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಂಗಳವಾರ ‌ಬೆಳಿಗ್ಗೆ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದರು.

ಬೆಂಗಳೂರಿನ ಮೌರ್ಯ ವೃತ್ತದಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಕಾಂಗ್ರೆಸ್ ಹೇಳಿದಂತೆ ನಡೆದುಕೊಳ್ಳಬೇಕು, 10 ಕೆಜಿ ಅಕ್ಕಿ ಕೊಡಬೇಕು, ಅಕ್ಕಿ ವಿಚಾರದಲ್ಲಿ ಕೇಂದ್ರದ ಮೇಲೆ ಗೂಬೆ ಕಾಂಗ್ರೆಸ್ ನಾಯಕರು ಕೂರಿಸುತ್ತಿದ್ದಾರೆ ಎಂದು ಆರ್.ಅಶೋಕ್ ವಾಗ್ದಾಳಿ ‌ನಡೆಸಿದರು.

ಪ್ರತಿಭಟನೆ ‌ವೇಳೆ ಬಸವರಾಜ ಬೊಮ್ಮಾಯಿ, ಆರ್.ಅಶೋಕ್ ಸೇರಿದಂತೆ ಹಲವು ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದು ಬಸ್ ನಲ್ಲಿ ಕರೆದೊಯ್ದರು.