ಚಿಕ್ಕಮಗಳೂರಲ್ಲಿ: ಸಿದ್ದರಾಮಯ್ಯ ಒಬ್ಬ ಬೇಜವಾಬ್ದಾರಿ ಮುಖ್ಯಮಂತ್ರಿ, ಯೋಜನೆಗಳನ್ನು ಘೋಷಿಸು ವಾಗ ತಲೆಯಲ್ಲಿ ಮೆದುಳು ಇರಲಿಲ್ವಾ ಎಂದು ಕೇಂದ್ರ ಸಚಿವೆ ಶೋಭಾಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅಕ್ಕಿ ಕೊಡಲು ಆಗದಿದ್ದರೆ ಅಧಿಕಾರ ಬಿಟ್ಟು ತೊಲಗಲಿ ಎಂದು ಹೇಳಿದರು.
ಒಂದೇ ತಿಂಗಳಿಗೆ ರಾಜ್ಯದಲ್ಲಿ ಅರಾಜಕತೆ ತುಂಬಿದೆ. ಕಾಂಗ್ರೆಸ್ಸಿಗರಿಗೆ ಮಾನ ಮರ್ಯಾದೆ ಇಲ್ಲ ಎಂದು ಗುಡುಗಿದರು.
ಇದು ಬೇಜವಾಬ್ದಾರಿ ಸರ್ಕಾರ, ಚುನಾವಣೆಯಲ್ಲಿ ಗೆಲ್ಲಲು ಇಲ್ಲದ ಭರವಸೆ ನೀಡಿ ಆಸೆ ತೋರಿಸಿದಿರಿ.
ಈಗ ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಪಾಸ್ ಕೇಳುತ್ತಿದ್ದಾರೆ, ಸರ್ಟಿಫಿಕೇಟ್ ಕೇಳುತ್ತಿದ್ದಾರೆ ನಾನು ಮಹಿಳೆ ಅನ್ನೋದಕ್ಕೆ ಸರ್ಟಿಫಿಕೇಟ್ ಬೇಕಿಲ್ಲ ಎಂದು ಶೋಭಾ ಕರಂದ್ಲಾಜೆ ಆಕ್ರೋಶ ವ್ಯಕ್ತಪಡಿಸಿದರು.

