ಮಧ್ಯಪ್ರದೇಶ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ದೇಶದ ಐದು ವಂದೇ ಭಾರತ್ ರೈಲುಗಳಿಗೆ ಏಕ ಕಾಲಕ್ಕೆ ಚಾಲನೆ ನೀಡಿದ್ದಾರೆ
ಭೂಪಾಲ್ ರಾಣಿ ಕಮಲಾಪತಿ ರೈಲು ನಿಲ್ದಾಣದಲ್ಲಿ ಏಕಕಾಲದಲ್ಲಿ ಐದು ವಂದೇ ಭಾರತ್ ರೈಲುಗಳೀಗೆ ಮೋದಿ ಅವರು ವರ್ಚ್ಯುವಲ್ ಮೂಲಕ ಗ್ರೀನ್ ಸಿಗ್ನಲ್ ತೋರಿಸಿದರು.
ರಾಣಿ ಕಮಲಾಪತಿ-ಜಬಲ್‌ಪುರ ವಂದೇ ಭಾರತ್ ಎಕ್ಸ್‌ಪ್ರೆಸ್, ಖಜುರಾಹೊ-ಭೋಪಾಲ್-ಇಂದೋರ್ ವಂದೇ ಭಾರತ್ ಎಕ್ಸ್‌ಪ್ರೆಸ್, ಮಡಗಾಂವ್ (ಗೋವಾ)-ಮುಂಬೈ ವಂದೇ ಭಾರತ್ ಎಕ್ಸ್‌ಪ್ರೆಸ್, ಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್, ಹತಿಯಾ-ಪಾಟ್ನಾ ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದ್ದಾರೆ.
ಈ ವೇಳೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಮಧ್ಯ ಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಉಪಸ್ಥಿತರಿದ್ದರು.
ಧಾರವಾಡದಲ್ಲಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಉದ್ಘಾಟನೆ ವೇಳಡ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉಪಸ್ಥಿತರಿದ್ದರು.
ಧಾರವಾಡ-ಕೆಎಸ್‌ಆರ್ ಬೆಂಗಳೂರು ನಗರಗಳ ನಡುವಿನ ಗಾಡಿಯು ಸಂಪೂರ್ಣವಾಗಿ ಕರ್ನಾಟಕದಲ್ಲಿಯೇ ಓಡಾಡುವ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ಆಗಿದೆ.
ಈ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳು ಯಶವಂತಪುರ, ದಾವಣಗೆರೆ ಮತ್ತು ಎಸ್‌ಎಸ್‌ಎಸ್ ಹುಬ್ಬಳ್ಳಿ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿವೆ.
ಉದ್ಘಾಟನಾ ವಿಶೇಷ ರೈಲು ಗಾಡಿಯು ಮಂಗಳವಾರ ಬೆಳಗ್ಗೆ ಸುಮಾರು 10.35 ಕ್ಕೆ ಧಾರವಾಡ ರೈಲು ನಿಲ್ದಾಣದಿಂದ ಪ್ರಯಾಣ ಪ್ರಾರಂಭಿಸಿತು.
ಹುಬ್ಬಳ್ಳಿ, ಹಾವೇರಿ, ರಾಣಿಬೆನ್ನೂರು, ಹರಿಹರ, ದಾವಣಗೆರೆ, ಚಿಕ್ಕಜಾಜೂರು, ಬೀರೂರು, ಅರಸೀಕೆರೆ, ತಿಪಟೂರು, ಅಮ್ಮಸಂದ್ರ, ತುಮಕೂರು, ದೊಡ್ಡಬೆಲೆ, ಚಿಕ್ಕಬಾಣಾವರ ಮತ್ತು ಯಶವಂತಪುರ ಮಾರ್ಗವಾಗಿ ಚಲಿಸಿ ಗಮ್ಯಸ್ಥಾನವನ್ನು ತಲುಪಲಿದೆ.

