ಔರಾದಕರ್ ವರದಿ ಶೀಘ್ರ ಜಾರಿಗೆ ಯತ್ನ-ಜಿ.ಪರಮೇಶ್ವರ್

ಮೈಸೂರು: ಪೊಲೀಸರ ಅನುಕೂಲಕ್ಕಾಗಿ  ಔರಾದಕರ್ ವರದಿಯನ್ನು ಶೀಘ್ರ ಜಾರಿಗೆ ತರಲು ಪ್ರಯತ್ನಿಸುತ್ತೇನೆ ಎಂದು ಗೃಹ ಸಚಿವ ಪರಮೇಶ್ವರ್ ಭರವಸೆ ನೀಡಿದರು

ಮೈಸೂರಿನಲ್ಲಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಅವರು   ಮಾತನಾಡಿದರು.

ಔರಾದ್ಕರ್ ವರದಿಯನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗದು, ಆದರೆ ಅದರಲ್ಲಿನ ಕೆಲ ಅಂಶಗಳನ್ನು ಪರಿಗಣಿಸಿ ಜಾರಿಗೆ ತರಲಾಗುವುದು ಎಂದು ಹೇಳಿದರು.

ಹಿರಿಯ ಪೊಲೀಸ್ ಅಧಿಕಾರಿಗಳಿಗೆ ವಾರದ ರಜೆ ನೀಡುವ ಬಗ್ಗೆ ಪರಿಶೀಲಿಸಿ ಮುಂದಿನ ದಿನಗಳಲ್ಲಿ ಕಟ್ಟುನಿಟ್ಟಾಗಿ ಜಾರಿಗೆ ತರಲಾಗುವುದು ಎಂದು ತಿಳಿಸಿದರು. 

ಮೈಸೂರು-ಬೆಂಗಳೂರು ರಸ್ತೆಯಲ್ಲಿನ ಮಂಡ್ಯ ಸಮೀಪ ನಡೆದಿರುವ ದರೋಡೆ ಬಗ್ಗೆ ನನಗೆ ಮಾಹಿತಿ ಇಲ್ಲ ಈ ಬಗ್ಗೆ ಪೂರ್ಣ ಮಾಹಿತಿ ಪಡೆದು ಅಗತ್ಯ Sbse ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಮೈಸೂರು ‌- ಬೆಂಗಳೂರು ಹೈವೇ ಟೋಲ್ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್, ರಾಜ್ಯ ಸರ್ಕಾರದ ಅಡಿಯಲ್ಲಿ ಟೋಲ್ ಸಂಗ್ರಹ ಬರುವುದಿಲ್ಲ. ಕೇಂದ್ರ ಸರ್ಕಾರ ಈ ಕುರಿತು ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದರು.

ನಾವು ಕೂಡಾ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದು ಟೋಲ್ ಸಂಗ್ರಹ ದರದಲ್ಲಿ ಕಡಿತ ಗೊಳಿಸಬೇಕೆಂದು ಬೇಡಿಕೆ ಇಟ್ಟಿದ್ದೇವೆ ಎಂದು ತಿಳಿಸಿದರು.

ನಾನು ನಾಡ ಅದಿದೇವತೆ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದಿದ್ದು ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗಾಗಿ ದೇವಿಯಲ್ಲಿ ಪ್ರಾರ್ಥಿಸಿದ್ದೇನೆ ಎಂದು ಹೇಳಿದರು.

ಮೈಸೂರು ಒಡೆಯರ ಮನೆತನದವರಿಗೂ ನಮಗೂ ಬಹಳ ವರ್ಷಗಳಿಂದ ಪರಿಚಯವಿದೆ. ಅವರನ್ನು ಭೇಟಿಯಾಗಲು  ನಾನು ಮೈಸೂರಿಗೆ ಬಂದಿದ್ದೇನೆ‌ ಎಂದು ಪರಮೇಶ್ವರ್  ತಿಳಿಸಿದರು.