ತನಿಖೆ ನಡೆಸುವ ತಾಖತ್ತು ಇದ್ದರೆ ದಾಖಲೆ ಕೊಡುತ್ತೇನೆ; ಸರ್ಕಾರಕ್ಕೆ ಎಚ್‌ಡಿ ಕೆ ಸವಾಲು

ಬೆಂಗಳೂರು: ಈ ಸರಕಾರದಲ್ಲಿ ನಡೆಯುತ್ತಿರುವ ವರ್ಗಾವಣೆ ದಂಧೆ ಹಾಗೂ ಕಾಸಿಗಾಗಿ ಪೋಸ್ಟಿಂಗ್ ಬಗ್ಗೆ  ದಾಖಲೆ ಕೊಡಲು ಸಿದ್ಧ,ತನಿಖೆ ನಡೆಸುವ ತಾಕತ್ತು ಇದೆಯೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸರಕಾರಕ್ಕೆ ಸವಾಲು ಹಾಕಿದರು.

ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾರೋ ಒಬ್ಬರು ತಾಖತ್ತು ಇದ್ದರೆ ಕುಮಾರಸ್ವಾಮಿ ದಾಖಲೆ ಕೊಡಲಿ ಎಂದು ಹೇಳಿದ್ದಾರೆ. ನನ್ನ ಹತ್ತಿರ ದಾಖಲೆ ಇವೆ ತನಿಖೆ ಮಾಡಿಸಲಿ ಎಂದು ‌ಹೇಳಿದರು.

ಸರಕಾರ ಇನ್ನೂ ಹನಿಮೂನ್ ಪೀರಿಯಡ್ ನಲ್ಲಿದೆ ಎಂದು ಹೇಳುತ್ತಿದ್ದಾರೆ ಕಾಂಗ್ರೆಸ್‌ ನವರು. ಸರಕಾರಕ್ಕೆ ಐದು ಆರು ತಿಂಗಳಾದರೂ ಸಮಯ ಕೊಡಬೇಡವೇ ಎಂದು ಕೆಲವರು ಕೇಳುತ್ತಿದ್ದಾರೆ.

ಹನಿಮೂನ್ ಪೀರಿಯಡ್ ನಲ್ಲಿದ್ದರೆ ಈಗೆಲ್ಲಾ ಮಾಡುತ್ತಾರೆಯೇ ಹನಿಮೂನ್ ಪಿರಿಯಡ್ ನಲ್ಲೇ ಹೀಗಾದರೆ ಮುಂದಿರುವ ಪೀರಿಯಡ್ ಗಳ ಕಥೆ ಏನು ಎಂದು ಎಚ್ ಡಿ ಕೆ ತೀಕ್ಷ್ಣವಾಗಿ ಪ್ರಶ್ನಿಸಿದರು.

ನಾನು ದಾಖಲೆ ಕೊಟ್ಟರೆ ಯಾವ ಮಂತ್ರಿಯ ಇಲಾಖೆಯಲ್ಲಿ ವರ್ಗಾವಣೆ ದಂಧೆ ನಡೆದಿದೆ  ಆ ಮಂತ್ರಿಯನ್ನು ವಜಾ ಮಾಡುತ್ತೀರಾ ಆ  ತಾಕತ್ ಇವರಿಗೆ ಎಂದು ಪ್ರಶ್ನಿಸಿದರು.

ನಾನು ದಾಖಲೆ ಕೊಟ್ಟರೆ ಈ ಸರ್ಕಾರ ಎಲ್ಲಿರುತ್ತೊ ಗೊತ್ತಿಲ್ಲ. ಸುಮ್ಮನೆ ಸ್ವಲ್ಪ ದಿನ ಈ ಸರಕಾರ ನೆಮ್ಮದಿಯಾಗಿರಲಿ ಎಂದು ಬಿಟ್ಟಿದೀನಿ. ಸರಕಾರ ತಿದ್ದಿಕೊಂಡರೆ ಒಳ್ಳೆಯದು ಎಂದು ಬಿಟ್ಟಿದೀನಿ ಅಷ್ಟೇ  ಎಂದು ಹೇಳಿದರು.

ನನ್ನ ಅವಧಿಯಲ್ಲಿ ನಡೆದ ವರ್ಗಾವಣೆಗಳ ಬಗ್ಗೆಯೂ ತನಿಖೆ ನಡೆಸುವುದಾಗಿ ಹೇಳಿದ್ದಾರೆ, ತನಿಖೆ ಮಾಡಲಿ.

ಐದು ವರ್ಷ ಕಾಂಗ್ರೆಸ್ ಪಕ್ಷದ ಪೂರ್ಣ ಸರಕಾರ ಇತ್ತಲ್ಲ, ಆ ಅವಧಿಯಲ್ಲಿ ನಡೆದ ವರ್ಗಾವಣೆಗಳ ಕುರಿತು ತನಿಖೆ ನಡೆಸಲಿ ಎಂದು ಒತ್ತಾಯಿಸಿದರು.

ಕಾಂಗ್ರೆಸ್ ನವರು ಹಗಲು ದರೋಡೆ ಗೆ ಇಳಿದಿದ್ದಾರೆ. ವರ್ಗವಣೆ ದಂಧೆಗೆ ಹಣ ನಿಗದಿ ಮಾಡಿದ್ದಾರೆ ಅಂತ ಗೊತ್ತು. ಪ್ರತಿ ಹುದ್ದೆಗೂ ಒಂದೊಂದು ರೇಟ್ ಫಿಕ್ಸ್ ಮಾಡಿದ್ದಾರೆ. ಸಮಯ ಬಂದಾಗ ದಾಖಲೆ ಕೊಟ್ಟೆ ಕೊಡುತ್ತೇನೆ ಎಂದು ಎಚ್ಚರಿಕೆ ನೀಡಿದರು.