ರಾಹುಲ್ ಗಾಂಧಿ ಮೇಲ್ಮನವಿ ಅರ್ಜಿ ವಜಾಗೊಳಿಸಿದ‌ ನ್ಯಾಯಾಲಯ

ಗುಜರಾತ್: ಮೋದಿ ಉಪನಾಮಕ್ಕೆ ಸಂಬಂಧಿಸಿದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಸೂರತ್ ನ್ಯಾಯಾಲಯ ವಿಧಿಸಿದ್ಧ 2 ವರ್ಷ ಶಿಕ್ಷೆ ಪ್ರಮಾಣ ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ  ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನ ಗುಜರಾತ್ ಹೈಕೋರ್ಟ್​  ವಜಾಗೊಳಿಸಿದೆ.

ರಾಹುಲ್ ಗಾಂಧಿ‌ ಅವರಿಗೆ ಎರಡು ವರ್ಷಗಳ ಶಿಕ್ಷೆ ಕಾಯಂ ಆಗಲಿದೆ.

ಮಾರ್ಚ್​ 23ರಂದು ಸೂರತ್ ನ್ಯಾಯಾಲಯವು ರಾಹುಲ್ ಗಾಂಧಿಯನ್ನು ದೋಷಿ ಎಂದು ಘೋಷಿಸಿ ಎರಡು ವರ್ಷಗಳ  ಶಿಕ್ಷೆ ವಿಧಿಸಿತ್ತು.

ಈ ಶಿಕ್ಷೆ ಪ್ರಮಾಣವನ್ನ ಪ್ರಶ್ನಿಸಿ ಗುಜರಾತ್ ಹೈಕೋರ್ಟ್​ ಗೆ ರಾಹುಲ್ ಗಾಂಧಿ ಮೇಲ್ಮನವಿ ಸಲ್ಲಿಸಿದ್ದರು.

ಗುಜರಾತ್ ನ್ಯಾಯಾಲಯ ರಾಹುಲ್ ಗಾಂಧಿಯವರ ಅರ್ಜಿಯನ್ನು ವಜಾಗೊಳಿಸಿದೆ.

ಶಿಕ್ಷೆ ಪ್ರಕಟವಾದ ಬಳಿಕ ಅವರನ್ನು ಲೋಕಸಭೆಯ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿತ್ತು.

2019ರ ಲೋಕಸಭಾ ಚುನಾವಣೆಯ ಪ್ರಚಾರದ ಸಮಯದಲ್ಲಿ ಕೋಲಾರದಲ್ಲಿ ತಮ್ಮ ಭಾಷಣದಲ್ಲಿ ಎಲ್ಲಾ ಕಳ್ಳರಿಗೂ ಮೋದಿ ಉಪನಾಮವಿದೆ ಎಂದು ರಾಹುಲ್ ಹೇಳಿದ್ದರು.

ಈ ಬಗ್ಗೆ ಬಿಜೆಪಿ ನಾಯಕ ಪೂರ್ಣೇಶ್ ಮೋದಿ ಸೂರತ್ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು.