ಬೆಂಗಳೂರು: ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು 14ನೇ ಬಾರಿಗೆ ಬಜೆಟ್ ಮಂಡನೆ ಮಾಡುವ ಮೂಲಕ ದಾಖಲೆ ಬರೆದಿದ್ದಾರೆ.
ಈ ಬಾರಿ 3.27 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡಿಸಿದ್ದು,ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ತತ್ವದಡಿ ಬಜೆಟ್ ಮಂಡಿಸಿದ್ದಾರೆ.
ಕಾನೂನು ಸುವ್ಯವಸ್ಥೆ ಕಾಪಾಡುವುದು, ಸಾಮಾಜಿಕ ಸೇವೆ, ಮೂಲಸೌಕರ್ಯ ಒದಗಿಸುವುದು, ಸಮಾಜದ ದುರ್ಬಲ ವರ್ಗಗಳ ಕಲ್ಯಾಣ, ಪರಿಸರ ಸಂರಕ್ಷಣೆ, ಆರ್ಥಿಕ ಅಭಿವೃದ್ಧಿಗೆ ಉತ್ತೇಜನ, ರೈತರ ಏಳಿಗೆ, ಸಂಪನ್ಮೂಲಗಳ ನ್ಯಾಯಯುತ ಹಂಚಿಕೆ ಮತ್ತು ಸಮಾನ ಅವಕಾಶಗಳನ್ನು ಸೃಜನೆ ಮಾಡುವುದು ನಮ್ಮ ಆದ್ಯತೆಯಾಗಿದೆ ಎಂದು ಹೇಳಿದರು.
ಗ್ಯಾರಂಟಿ ಯೋಜನೆಗಳನ್ನು ಕೇವಲ ಬಿಟ್ಟಿ ಕೊಡುಗೆಗಳೆಂದು ಆಡಿಕೊಳ್ಳುವವರು ಒಮ್ಮೆ ನಮ್ಮ ಬಡವರ, ಶ್ರಮಿಕರ ಬದುಕನ್ನು ಗಮನಿಸಬೇಕೆಂದು ಸಿದ್ದು ಮನವಿ ಮಾಡಿದರು
ನೋಡದುದನ್ನು ನೋಡಿದಂತೆ ವರ್ಣಿಸಿದರೆ ಒಪ್ಪುವುದೆ ಅಯ್ಯಾ ಎಂಬ ಸಿದ್ದಯ್ಯ ಪುರಾಣಿಕ ಅವರ ಮಾತುಗಳನ್ನು ಈ ವೇಳೆ ಸಿಎಂ ಉಲ್ಲೇಖಿಸಿದರು.
ಸಿದ್ದು ಬಜೆಟ್ ಹೈಲೈಟ್ಸ್:
ನಾಡಿನ ಅಧಿದೇವತೆ ಮೈಸೂರಿನ ಚಾಮುಂಡೇಶ್ವರಿ ಬೆಟ್ಟದ ಸಮಗ್ರ ಅಭಿವೃದ್ಧಿಗಾಗಿ ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಅಭಿವೃದ್ದಿ ಪ್ರಾಧಿಕಾರ ರಚನೆ ಮಾಡುವುದಾಗಿ ರಾಜ್ಯ ಸರ್ಕಾರ ಘೋಷಿಸಿದೆ.
ಈ ಬಾರಿ ಮೈಸೂರು ಜಿಲ್ಲೆಯಲ್ಲೇ ಚಿತ್ರನಗರಿ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಮಾಜಿ ದೇವದಾಸಿಯರು, ತೃತೀಯ ಲಿಂಗಿಗಳಿಗೂ ಗೃಹಲಕ್ಷ್ಮೀ ಯೋಜನೆಯ 2,000 ರೂ.
ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ಡಯಾಲಿಸ್ ಕೇಂದ್ರ ಸ್ಥಾಪನೆ.
10 ನೇ ತರಗತಿವರೆಗೆ ಸರ್ಕಾರಿ, ಅನುದಾನಿತ ಶಾಲೆಗಳ ಮಕ್ಕಳಿಗೆ ಮೊಟ್ಟೆ ಭಾಗ್ಯ
ಎಪಿಎಂಸಿ ಕಾಯ್ದೆ ಹಿಂತೆಗೆತ ಘೋಷಣೆ-
ಅಬಕಾರಿ ತೆರಿಗೆ ಶೇ.. 20 ರಷ್ಟು ಹೆಚ್ಚಳ-
75 ಕೋಟಿ ರೂಪಾಯಿ ವೆಚ್ಚದಲ್ಲಿ ರೇಷ್ಮೆ ಮಾರುಕಟ್ಟೆ-
ರೈತರ ಉತ್ಪನ್ನಗಳಿಗೆ ಏಕೀಕೃತ ಬ್ರ್ಯಾಂಡಿಂಗ್ ವ್ಯವಸ್ಥೆಗೆ 10 ಕೋಟಿ ರೂ-
ಕೃಷಿ ಉದ್ಯಮ ಉತ್ತೇಜಿಸಲು ನವೋದ್ಯಮ ಯೋಜನೆಗೆ 10 ಕೋಟಿ ರೂ-
ನಮ್ಮ ಮೆಟ್ರೋಗೆ 30 ಸಾವಿರ ಕೋಟಿ ರೂ. –
ಲೋಕೋಪಯೋಗಿ ಇಲಾಖೆಗೆ 10,143 ಕೋಟಿ ರೂ. ಅನುದಾನ-
ಇಂದಿರಾ ಕ್ಯಾಂಟೀನ್ ಗೆ 100 ಕೋಟಿ ರೂ.
5 ಗ್ಯಾರೆಂಟಿ ಯೋಜನೆಗೆ 52,000 ಕೋಟಿ ರೂ.
ಬ್ರ್ಯಾಂಡ್ ಬೆಂಗಳೂರುಗೆ 45000 ಕೋಟಿ ರೂ. ಅನುದಾನ-
ರೈತರಿಗೆ ಶೂನ್ಯ ಬಡಿದರದ ಸಾಲ ಮಿತಿ 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ-
ಕನಕಪುರದಲ್ಲಿ ಹೊಸ ವೈದ್ಯಕೀಯ ಕಾಲೇಜು
ಕೊಪ್ಪಳ, ಕಾರವಾರ ಕೊಡಗು ಜಿಲ್ಲಾ ಆಸ್ಪತ್ರೆ ಉನ್ನತೀಕರಣ-
ಮೈಸೂರು, ಕಲಬುರಗಿ ಬೆಳಗಾವಿಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ-
ಎತ್ತಿನ ಹೊಳೆ ಯೋಜನೆಗೆ ಪರಿಷ್ಕೃತ 22,252 ಕೋಟಿ ರೂ ಅನುದಾನ-

