ಡಾ. ಸ್ಮರಣಾರ್ಥ ಹೃದಯ ರೋಗಿಗಳಿಗೆ ವಿನೂತನ ಯೋಜನೆ

ಬೆಂಗಳೂರು: ದೇಶದಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ಹೃದಯಾಘಾತ ಸಂಬಂಧಿ ಸಾವುಗಳನ್ನು ತಡೆಯಲು ಸರ್ಕಾರ ಕರ್ನಾಟಕ ರತ್ನ ಡಾ.ಪುನೀತ್ ರಾಜ್‍ಕುಮಾರ್ ಅವರ ಸ್ಮರಣಾರ್ಥ ಆಟೋಮೇಟೆಡ್ ಎಕ್ಸ್ಟರ್ನಲ್ ಡಿಫಿಬ್ರಿಲೇಟರ್ಸ್(ಎಇಡಿ) ಎಂಬ ವಿನೂತನ ಯೋಜನೆಯನ್ನು ಪ್ರಕಟಿಸಿದೆ.

ಈ ಯೋಜನೆಗೆ ಬಜೆಟ್‍ನಲ್ಲಿ 6 ಕೋಟಿ ಅನುದಾನವನ್ನು ಒದಗಿಸಲಾಗಿದ್ದು, ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಇದು ಜಾರಿಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ರಾಜ್ಯದಲ್ಲಿ ಕೆಲವು ಜಿಲ್ಲಾಸ್ಪತ್ರೆಗಳಲ್ಲಿ 15 ಸಿಟಿ ಸ್ಕ್ಯಾನಿಂಗ್ ಮತ್ತು ಆರು ಎಂಆರ್‍ಐ ಸ್ಕ್ಯಾನಿಂಗ್ ಕೇಂದ್ರಗಳನ್ನು ಈಗಾಗಲೇ ಸಾರ್ವಜನಿಕ ಸಹಭಾಗಿತ್ವದಲ್ಲಿ ಸ್ಥಾಪಿಸಿ, ಉಚಿತ ಪ್ರಯೋಗಾಲಯ ಸೇವೆಗಳನ್ನು ನೀಡಲಾಗುತ್ತಿದೆ.

ಈ ಸೇವೆಗಳನ್ನು ರಾಜ್ಯದ ಎಲ್ಲಾ ಜಿಲ್ಲಾ ಅಸ್ಪತ್ರೆಗಳಲ್ಲಿ ವಿಸ್ತರಣೆ ಮಾಡಲಾಗುತ್ತದೆ ಎಂದು ಸಿಎಂ ತಿಳಿಸಿದರು.