ಬೆಂಗಳೂರು: ಸೋಮವಾರ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಸಿಗಲಿದ್ದು ಜುಲೈ 19ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.
ಶನಿವಾರ ಸುದ್ಧಿಗೋಷ್ಠಿಯಲ್ಲಿ ಗೃಹಲಕ್ಷ್ಮೀ ಯೋಜನೆಗ ಬಗ್ಗೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ಕರ್ನಾಟಕ ಒನ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಹೇಳಿದರು.
ಜುಲೈ 19ರಿಂದ ಗೃಹಲಕ್ಷ್ಮಿ ಯಜನೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ, ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕವಿಲ್ಲ,ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು.
ನಗರಾಡಳಿತ ಕಚೇರಿಗಳಲ್ಲಿಯೂ ಅರ್ಜಿ ಸಲ್ಲಿಸಬಹುದು,1.28 ಕೋಟಿ ಕುಟುಂಬ ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆಯಲಿವೆ. ಗೃಹ ಲಕ್ಷ್ಮಿ ಯೋಜನೆಗೆ 1902 ಸಹಾಯವಾಣಿ ನೀಡಲಾಗಿದ್ದು ಸಮಸ್ಯೆ ಇದ್ದರೆ ತಳಿಸಬಹುದು.
ಅರ್ಜಿ ಸಲ್ಲಿಕೆಗೆ ಆಧಾರ್ ಕಾರ್ಡ್ ಕಡ್ಡಾಯವಾಗಿದ್ದು, ಅರ್ಜಿ ಸಲ್ಲಿಕೆಗೆ ಯಾವುದೇ ಡೆಡ್ ಲೈನ್ ಇರುವುದಿಲ್ಲ.
ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡುವ ಸಂದರ್ಭದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಲಾಗುವುದು ಎಂದು ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.

