ಬೆಂಗಳೂರು: ಬೆಂಗಳೂರಿನಲ್ಲಿ ಮಹಾ ಘಟಬಂಧನದ ಎರಡನೇ ದಿನದ ಸಭೆ ಭರ್ಜರಿಯಾಗಿಯೇ ನಡೆಯಿತು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ.ಸ್ಟ್ಯಾಲಿನ್, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಘಟಾನುಘಟಿ ನಾಯಕರುಗಳು ಪಾಲ್ಗೊಂಡಿದ್ದರು.
ಸಭೆ ಪ್ರಾರಂಭವಾಗುವುದಕ್ಕೂ ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಹಲವು ಕಾಂಗ್ರೆಸ್ ನಾಯಕರು ಆರ್ ಜೆ ಡಿ ಮುಖ್ಯಸ್ಥ ಲಘು ಪ್ರಸಾದ್ ಯಾದವ್ ಹಾಗೂ ಬಿಹಾರ ಸಿಎಂ ನಿತೀಶ್ ಕುಮಾರ್,ಧ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಮತ್ತಿತರರನ್ನು ಸ್ವಾಗತಿಸಿ ಕರೆದೊಯ್ದರು.
ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೊಟೆಲ್ ನಲ್ಲಿ ಸಭೆಯು ಸಂಜೆವರೆಗೆ ನಡೆಯಿತು, ಸಭೆಯಲ್ಲಿ ಕಾಂಗ್ರೆಸ್ ಗೆ 26 ಪಕ್ಷಗಳ ಬೆಂಬಲ ದೊರೆತಿದೆ.
24 ವಿವಿಧ ರಾಜಕೀಯ ಪಕ್ಷಗಳ ನಲವತ್ತಕ್ಕೂ ಹೆಚ್ಚು ಮುಖಂಡರು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಹಲವು ವಿಷಯಗಳನ್ನು ಚರ್ಚಿಸಿದರು.
2024ರ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈ ಸಭೆ ನಡೆದಿದ್ದು ಸ್ಥಾನ ಹಂಚಿಕೆ ಮಹಾಘಟ ಬಂಧನದ ಗೆಲುವಿಗೆ ಅನುಸರಿಸಬೇಕಾದ ಕಾರ್ಯತಂತ್ರಗಳನ್ನು ಸಭೆಯಲ್ಲಿ ಚರ್ಚಿಸಲಾಯಿತು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ದೇಶ ವ್ಯಾಪಿ ಆಂದೋಲನ ಹಮ್ಮಿಕೊಳ್ಳುವ ಕುರಿತು ಕೆಲ ನಿರ್ಣಯ ತೆಗೆದುಕೊಳ್ಳಲಾಗಿದೆ.

