ಮೈಸೂರು: 10 ರಿಂದ 15 ಮಾಜಿ ಹಾಗೂ ಹಾಲಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರಲು ಸಿದ್ದರಿದ್ದಾರೆ,ಈ ಬಗ್ಗೆ ಮಾತುಕತೆ ನಡೆಯುತ್ತಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಸ್ಪೋಟಕ ಮಾಹಿತಿ ನೀಡಿದ್ದಾರೆ.
ಮೈಸೂರಿನಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸಚಿವರು, ಹಾಲಿ ಮಾಜಿ ಶಾಸಕರ ಸೇರ್ಪಡೆ ಬಗ್ಗೆ ಎಲ್ಲರ ಜತೆ ಮಾತುಕತೆ ನಡೆಯುತ್ತಿದೆ,ಶೀಘ್ರವೆ ಎಲ್ಲವೂ ಅಂತಿಮವಾಗಲಿದೆ ಎಂದು ತಿಳಿಸಿದರು.
ಯಾರು ,ಯಾರು ಸೇರುತ್ತಿದ್ದಾರೆ ಎಂಬ ಪ್ರಶ್ನೆಗೆ ಈಗಲೆ ಅವರ ಹೆಸರು ಹೇಳಲು ಸಾಧ್ಯವಿಲ್ಲ,ಆದರೆ ಬಿಜೆಪಿ ಹಾಗೂ ಜೆಡಿಎಸ್ ನಿಂದ ನಮ್ಮ ಪಕ್ಷಕ್ಕೆ ಕೆಲವರು ಬರುವುದು ಖಚಿತ ಎಂದು ಹೇಳಿದರು.
ರಾಜ್ಯದಲ್ಲಿ ಬರ ಘೋಷಣೆ ಮಾಡುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಚೆಲುವರಾಯಸ್ವಾಮಿ,ಈ ಬಗ್ಗೆ ಸಭೆ ನಡೆಸಿದ್ದೇವೆ. ಜೂನ್ ಮತ್ತು ಆಗಸ್ಟ್ ನಲ್ಲಿ ಮಳೆ ಕೊರತೆಯಾಗಿದೆ. ಶೇ 60 ರಷ್ಟು ಬರ ಇದ್ದರೆ ಕೇಂದ್ರ ಅನುದಾದ ಬಿಡುಗಡೆ ಮಾಡುತ್ತದೆ ಎಂದು ತಿಳಿಸಿದರು.
ಇದನ್ನ 30% ಗೆ ಇಳಿಸುವಂತೆ ಕೇಂದ್ರಕ್ಕೆ ಮುಖ್ಯಮಂತ್ರಿಗಳು ಪತ್ರ ಬರೆದಿದ್ದಾರೆ.ಅದಕ್ಕೆ ಕೇಂದ್ರದಿಂದ ಉತ್ತರ ಬಂದಿಲ್ಲ. 30% ಇಳಿಸುವ ಬಗ್ಗೆ ಉತ್ತರ ಬಂದ ನಂತರ ಸಭೆ ನಡೆಸಿ ತೀರ್ಮಾನ ಮಾಡಲಾಗುತ್ತದೆ.
ಕಮಿಟಿ ಮೀಟಿಂಗ್ ನಲ್ಲಿ ಬರ ನೀರಿನ ಪರಿಸ್ಥಿತಿಯ ವರದಿಯನ್ನ ಅಧಿಕಾರಿಗಳ ಬಳಿ ಕೇಳಿದ್ದೇವೆ ಎಂದು ಕೃಷಿಸಚಿವರು ತಿಳಿಸಿದರು.
ಗುತ್ತಿಗೆದಾರರಿಂದ ಹಣ ವಸೂಲಿ ಆರೋಪ ಕುರಿತು ಕೇಳಿದ ಪ್ರಶ್ನೆಗೆ, ಅಯ್ಯೋ ಬಿಡಿ ಇದೆಲ್ಲಾ ಕೆಲಸ ಇಲ್ಲದವರು ಮಾತನಾಡೋದು ಎಂದು ಹೇಳಿದರು.
ಹಿಂದಿನ ಸರ್ಕಾರದ ಅವಧಿಯಲ್ಲಿ ಒಂದು ವರ್ಷ ಪೇಮೆಂಟ್ ಕೊಟ್ಟಿರಲಿಲ್ಲ. ನಾವು ಬಂದು ಕೇವಲ ಎರಡು ತಿಂಗಳಾಗಿದೆ 2.5 ಲಕ್ಷ ಕೋಟಿ ಅನುದಾನವನ್ನ ಒಂದೇ ಸಾರಿ ಹೇಗೆ ಕೋಡೋಕೆ ಆಗುತ್ತದೆ.
ಬಾಯಿ ಚಪಲಕ್ಕೆ ಏನೇನೋ ಮಾತಾನಾಡುತ್ತಾರೆ ಅವರಿಗೆಲ್ಲ ಉತ್ತರ ಕೋಡೋಕೆ ಆಗುತ್ತಾ ಎಂದು ಸಚಿವರು ಮರು ಪ್ರಶ್ನಿಸಿದರು.

