ಬೆಂಗಳೂರು: ರಾಜ್ಯದಲ್ಲಿನ ದೇವಸ್ಥಾನಗಳ ಜೀರ್ಣೋದ್ದಾರಕ್ಕೆ ಕೊಡುತ್ತಿದ್ದ ಅನುದಾನವನ್ನು ರಾಜ್ಯ ಸರ್ಕಾರ ತಡೆ ಹಿಡಿದಿದೆ.
ಈ ಕುರಿತು ಧಾರ್ಮಿಕ ದತ್ತಿ ಇಲಾಖೆ ಆದೇಶ ಹೊರಡಿಸಿದೆ. ದೇವಸ್ಥಾನ ಜೀರ್ಣೋದ್ದಾರ ಕಾಮಗಾರಿ ಇನ್ನೂ ಪ್ರಾರಂಭ ಆಗದಿದ್ದರೆ ಹಣ ಬಿಡುಗಡೆ ಮಾಡದಂತೆ ಆದೇಶದಲ್ಲಿ ಸೂಚಿಸಲಾಗಿದೆ.
ಇನ್ನು ಶೇ.. 50ರಷ್ಟು ಹಣ ಬಿಡುಗಡೆಗೆ ಆಡಳಿತಾತ್ಮಕ ಅನುಮೋದನೆ ನೀಡಿದ್ದರೆ ಅದನ್ನು ತಕ್ಷಣ ತಡೆ ಹಿಡಿದು ಅನುದಾನ ಬಿಡುಗಡೆ ಮಾಡದಂತೆ ಸೂಚನೆ ನೀಡಲಾಗಿದೆ.
ಅನುದಾನದ ಆಡಳಿತಾತ್ಮಕ ಮಂಜೂರಾತಿಗೆ ಪ್ರಸ್ತಾವನೆ ಸಲ್ಲಿಕೆ ಆಗಿದ್ದರೆ ಆಡಳಿತಾತ್ಮಕ ಮಂಜೂರಾತಿಯನ್ನು ತಡೆಹಿಡಿಯಬೇಕು ಎಂದು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ನಿರ್ದೇಶನಗಳನ್ನು ಎಲ್ಲಾ ಜಿಲ್ಲಾಧಿಕಾರಿಗಳಿಗೆ ನೀಡಿದ್ದಾರೆ.

