ನಿಂತಿದ್ದ ಉದ್ಯಾನ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ: ತಪ್ಪಿದ ಭಾರೀ‌ ಅನಾಹುತ

ಬೆಂಗಳೂರು: ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ರೈಲಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಕೆಲ ಕಾಲ ತೀವ್ರ ಆತಂಕ ಸೃಷ್ಟಿಸಿತು.

ರೈಲು ನಿಲ್ದಾಣದಲ್ಲಿ ನಿಂತಿದ್ದ ಉದ್ಯಾನ್ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಳಗ್ಗೆ ಸುಮಾರು 7.30ರ ವೇಳೆ ಇದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ದಟ್ಟ ಹೊಗೆ ಆವರಿಸಿದೆ, ನಂತರ ಅದು ಎರಡು ಬೋಗಿಗಳಿಗೆ ಹರಡಿ ಪ್ರಯಾಣಿಕರು ಆತಂಕಗೊಂಡಿದ್ದಾರೆ.

ದಟ್ಟ ಹೋಗಿ ಆವರಿಸುತ್ತಿದ್ದಂತೆ ರೈಲ್ವೆ ಅಧಿಕಾರಿಗಳು ಎಚ್ಚೆತ್ತು ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

ಅಗ್ನಿ ಶಾಮಕ ದಳದ ಸಿಬ್ಬಂದಿ ದಾವಿಸಿಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ.ಬಹಳಷ್ಟು ಬೋಗಿಗಳಲ್ಲಿ ಪ್ರಯಾಣಿಕರು ಇರಲಿಲ್ಲ.

ಇತರೆ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗೆ ಇಳಿಸಲಾಗಿದ್ದು ಯಾರಿಗೂ ಪ್ರಾಣಪಾಯವಾಗಿಲ್ಲ.

ರೈಲ್ವೆ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದರು.

ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡಿರಬಹುದು ಎಂದು ಅಗ್ನಿಶಾಮಕ‌‌ ದಳದ ಎಡಿಜಿಪಿ ಹರಿಶೇಖರನ್ ಮಾಧ್ಯಮದವರಿಗೆ ತಿಳಿಸಿದ್ದಾರೆ.

ಪ್ರಯಾಣಿಕರಿಗೆ ಯಾರಿಗೂ ತೊಂದರೆಯಾಗಿಲ್ಲ ಬೆಂಕಿ ತಗುಲಿದ ಎರಡು ಬೋಗಿಗಳನ್ನು ಬೇರ್ಪಡಿಸಿ ಪ್ರಯಾಣಿಕರಿಗೆ ಬದಲಿ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ‌ರೈಲ್ವೆ‌ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಿದ್ದಾರೆ.