ಬೆಂಗಳೂರು: ಬೆಳಗಾವಿಯಲ್ಲಿ ನಡೆಯಬೇಕಾಗಿದ್ದ ಗೃಹಲಕ್ಷ್ಮಿ ಯೋಜನೆಯ ಉದ್ಘಾಟನಾ ಕಾರ್ಯಕ್ರಮವನ್ನು ಮೈಸೂರಿನಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೈಸೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ನಡೆಯಬೇಕಿದ್ದ ಗೃಹಲಕ್ಷ್ಮಿ ಯೋಜನೆಯ ಚಾಲನೆ ಕಾರ್ಯಕ್ರಮವನ್ನು ಮೈಸೂರಿಗೆ ಸ್ಥಳಾಂತರಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.
ಈ ಹಿಂದೆ ಗೃಹಲಕ್ಷ್ಮಿ ಯೋಜನೆಯ ಉದ್ಘಾಟನೆಯನ್ನು ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕ್ಷೇತ್ರ ಬೆಳಗಾವಿಯಲ್ಲಿ ನಡೆಸಲು ನಿರ್ಧರಿಸಲಾಗಿತ್ತು.
ಆಗಸ್ಟ್ 30 ರಂದು ಮೈಸೂರಿಗೆ ರಾಹುಲ್ ಭೇಟಿ ನೀಡಲಿದ್ದಾರೆ ಹಾಗಾಗಿ ಅದೇ ದಿನ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ದೊರೆಯಲಿದೆ.
ಅಂತೂ ಇಂತೂ ಸರ್ಕಾರ ಟೇಕಪ್ ಆಗಿ ಮೂರು ತಿಂಗಳಾಗುವ ಹೊತ್ತಿಗೆ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ಸಿಗುತ್ತಿದ್ದು,ಮಹಿಳೆಯರಲ್ಲಿ ಖುಷಿ ತಂದಿದೆ.

