ಕಾವೇರಿ ನದಿ ನೀರು ಹಂಚಿಕೆ ವಿವಾದ: ಪ್ರತ್ಯೇಕ ಪೀಠ ರಚನೆಗೆ ಸುಪ್ರೀಂ ಅಸ್ತು

ನವದೆಹಲಿ: ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ತಿಕ್ಕಾಟಕ್ಕೆ ಕಾರಣವಾಗಿರುವ ಕಾವೇರಿ ನದಿ ನೀರು ಹಂಚಿಕೆ ವಿವಾದ ಸಂಬಂಧ ವಿಚಾರಣೆಗೆ ಪ್ರತ್ಯೇಕ ಪೀಠ ರಚನೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ.

ಕರ್ನಾಟಕಕ್ಕೆ ನೀರು ಬಿಡುವಂತೆ ಸೂಚಿಸಬೇಕು ಎಂದು ಆಗ್ರಹಿಸಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯ ವಿಚಾರಣೆಗಾಗಿ ಪ್ರತ್ಯೇಕ ಪೀಠ ರಚನೆಗೆ ಸರ್ವೋಚ್ಚ ‌ನ್ಯಾಯಾಲಯ  ಗ್ರೀನ್ ಸಿಗ್ನಲ್ ನೀಡಿದೆ.

ಸುಪ್ರೀಂಕೋರ್ಟ್​ನಲ್ಲಿ ಸಿಜೆಐ ಪೀಠದ ಮುಂದೆ ತಮಿಳುನಾಡು ಸರ್ಕಾರ ಅರ್ಜಿ ಸಲ್ಲಿಸಿದ್ದು, ತಮಿಳುನಾಡು ಪರ ಹಿರಿಯ ವಕೀಲ ಮುಕುಲ್ ರೋಹಟಗಿ ಅರ್ಜಿ ಪ್ರಸ್ತಾಪಿಸಿದ್ದಾರೆ.

ಇದೇ ಆಗಸ್ಟ್ 14ರಿಂದ ಅನ್ವಯವಾಗುವಂತೆ ಕರ್ನಾಟಕದ ಜಲಾಶಯದಿಂದ 24,000 ಕ್ಯೂಸೆಕ್ ನೀರು ಬಿಡುಗಡೆ ಮಾಡಲು ನಿರ್ದೇಶಿಸುವಂತೆ ಕೋರಿದ ಮನವಿಯನ್ನು ಸೋಮವಾರ ಆಲಿಕೆ ವೇಳೆ ಪ್ರಸ್ತಾವಿಸುವಂತೆ ತಮಿಳುನಾಡು ಸರಕಾರಕ್ಕೆ ನ್ಯಾಯಾಲಯವು ಸೂಚಿಸಿತು.

ಹಿರಿಯ ವಕೀಲ ಮುಕುಲ್ ರೋಹ್ಟಗಿ ಅವರು ಈ ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ನೇತೃತ್ವದ ಪೀಠದ ಮುಂದೆ ಶುಕ್ರವಾರ ಪ್ರಸ್ತಾಪಿಸಿದರು.

ರೋಹ್ಟಗಿ ವಾದ ಮಂಡಿಸಿ ಜಿಲ್ಲೆಗಳಲ್ಲಿ  ಬೆಳೆಗಳಿಗೆ ತುರ್ತಾಗಿ ನೀರಿನ ಅಗತ್ಯತೆ ಇದೆ  ಹೇಳಿದ್ದರು.

ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಕರ್ನಾಟಕದ ಕೆಆರ್ ಎಸ್ ಹಾಗೂ ಕಬಿನಿ ಜಲಾಶಯದಿಂದ ಬಿಲ್ಲಿಗುಂಡ್ಲುವಿನಲ್ಲಿ 2023 ಆಗಸ್ಟ್ 11ರಂದು ಮುಂದಿನ 15 ದಿನಗಳಲ್ಲಿ ಬಿಡುಗಡೆ ಮಾಡಬೇಕಾಗಿದ್ದ ನೀರಿನ ಪ್ರಮಾಣವನ್ನು 15 ಸಾವಿರ ಕ್ಯೂಸೆಕ್ಸ್ ನಿಂದ 10 ಸಾವಿರ ಕ್ಯೂಸೆಕ್ಸ್ ಗೆ ಇಳಿಕೆ ಮಾಡಿದೆ. ಆ ಮೂಲಕ ಅದು ಆದೇಶವನ್ನು ಉಲ್ಲಂಘಿಸಿದೆ ಎಂದು ಮನವಿಯಲ್ಲಿ ಪ್ರತಿಪಾದಿಸಿದ್ದಾರೆ.