ತಮಿಳುನಾಡಿಗೆ ನೀರು ಬಿಡುಗಡೆ ಮಾಡಿದ್ದನ್ನು ಖಂಡಿಸಿ ಮಂಡ್ಯದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ 

ಮಂಡ್ಯ: ತಮಿಳುನಾಡಿಗೆ ನೀರು ಬಿಡುಗಡೆ ಮಾಡಿ ಕಾವೇರಿ ಕೊಳ್ಳದ ರೈತರಿಗೆ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು, ಕಾರ್ಯಕರ್ತರು ಮಂಡ್ಯದ ಸಂಜಯ್‌ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಸಂಸದೆ ಸುಮಲತಾ ನೇತೃತ್ವದಲ್ಲಿ ಪ್ರತಿಭಟನೆ ಆರಂಭವಾಗಿದ್ದು, ಮಂಡ್ಯ, ಮೈಸೂರು, ಚಾಮರಾಜನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದಾರೆ.

ಕೆ ಆರ್ ಎಸ್ ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆಯಾಗುತ್ತಿದ್ದರೂ ತಮಿಳುನಾಡಿಗೆ ನೀರು ಹರಿಸುತ್ತಿರುವುದು ಖಂಡನೀಯ ಎಂದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ರಾಜ್ಯದಲ್ಲಿ ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ. ಯಾರನ್ನೂ ಕೇಳದೆ ಈಗಾಗಲೇ 8 ಟಿಎಂಸಿ ನೀರು ಹರಿಸಿದ್ದಾರೆ ಎಂದು ಮುಖಂಡರು ಆರೋಪಿಸಿದರು.