ಬೆಂಗಳೂರು: ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವುದಿಲ್ಲ ಎಂದು ಶಾಸಕ ಎಸ್.ಟಿ ಸೋಮಶೇಖರ್ ಸ್ಪಷ್ಟಪಡಿಸಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ನಾನು ಕ್ಷೇತ್ರದ ವಿಚಾರವಾಗಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅರನ್ನ ಭೇಟಿಯಾಗಿದ್ದೆ. ಕ್ಷೇತ್ರದ ವಿಚಾರವಾಗಿ ಸಿಎಂ ಭೇಟಿಯಾಗುವುದು ತಪ್ಪೆ ಎಂದು ಪ್ರಶ್ನಿಸಿದರು.
ಬಿಜೆಪಿಯ ಕೆಲ ಮುಖಂಡರು ಕಾಂಗ್ರೆಸ್ ಸೇರುತ್ತಾರೆಂದು ವದಂತಿ ಇದೆ. ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ನಡೆಯುತ್ತಿದೆ ಎಂದು ತಿಳಿಸಿದರು.
ಬಿ.ಎಸ್ ಯಡಿಯೂರಪ್ಪ ನನ್ನ ಜೊತೆ ಮಾತನಾಡಿದ್ದಾರೆ. ನನಗೆ ತಡವಾಗಿ ಮೆಸೇಜ್ ಸಿಕ್ಕಿದೆ ಎಂದು ಹೇಳಿದ್ದೇನೆ. ನನ್ನನ್ನ ಬಿಜೆಪಿಗೆ ಕರೆತಂದವರು ಬಿಎಸ್ ವೈ ಸಚಿವರನ್ನಾಗಿ ಮಾಡಿ ಮೈಸೂರು ಜಿಲ್ಲಾ ಉಸ್ತುವಾರಿ ನೀಡಿದ್ದರು. ಅವರ ಹೊರತಾಗಿ ನಾನು ಏನು ಮಾಡುವುದಿಲ್ಲ ಎಂದು ಹೇಳಿದರು.
ಯಡೊಯೂರಪ್ಪ ಅವರು ಮನೆಗೆ ಬನ್ನಿ ಎಂದು ಕರೆದಿದ್ದಾರೆ ಅವರ ಜೊತೆ ಮಾತನಾಡುತ್ತೇನೆ ಎಂದು ಸೋಮಶೇಖರ್ ತಿಳಿಸಿದರು.

