ನಮ್ಮ ಪಕ್ಷ ಉಳಿಸುವ ಸಂಕಲ್ಪ ಮಾಡಿದ್ದೇನೆ-ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಹೇಳಿಕೆ

ಬೆಂಗಳೂರು: ಎರಡು ರಾಷ್ಟ್ರೀಯ ಪಕ್ಷಗಳ ನಡುವೆ ನಮ್ಮ ಪಕ್ಷ ಉಳಿಸುವ ಸಂಕಲ್ಪ ಮಾಡಿದ್ದೇನೆ‌ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ತಿಳಿಸಿದರು.

ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೇವೇಗೌಡರು ಜೆಡಿಎಸ್ ಉಳಿಸುವ ಸಂಕಲ್ಪ ಮಾಡಿರುವುದರಿಂದ ನಾನೂ ಕೂಡ ಪಕ್ಷದ ಸಂಘಟನೆಯಲ್ಲಿ ಪಾಲ್ಗೊಳ್ಳುವೆ ಎಂದು ಹೇಳಿದರು.

ಪಕ್ಷ ಸಂಘಟನೆಯ ದೃಷ್ಟಿಯಿಂದ ಹಲವು ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತಿದೆ ಎಂದರು.

ನಮಗೆ ಯಾವ ಪಕ್ಷದ ಮೇಲೂ ದ್ವೇಷ ಇಲ್ಲ,
ನಮ್ಮ ಪಕ್ಷ ಸಂಘಟನೆಗೊಳಿಸಿ ಉಳಿಸಬೇಕೆಂದು ನಾವು ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಈ ದೇಶದ ರಾಜಕಾರಣ ಹೇಗೆ ನಡೆಯುತ್ತಿದೆ ಎಂದು ನನಗೆ ಗೊತ್ತಿದೆ. ಜಿ.ಟಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ಜೆಡಿಎಸ್ ಕೋರ್ ಕಮಿಟಿ ಸದಸ್ಯರು ರಾಜ್ಯಾದ್ಯಂತ ಪ್ರವಾಸ ಮಾಡಲಿದ್ದಾರೆ.

ನಾನು ಕೂಡ ಪಕ್ಷದ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೇನೆ ಸಾಧ್ಯವಾದರೆ ನಾನೂ ಪ್ರವಾಸ ಮಾಡುವೆ ಎಂದು ಹೆಚ್.ಡಿ ದೇವೇಗೌಡರು ಹೇಳಿದರು.