ಬೆಂಗಳೂರು : ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಹೈಕೋರ್ಟ್ ಬಿಗ್ ಶಾಕ್ ನೀಡಿದ್ದು, ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಆದೇಶ ಹೊರಡಿಸಿದೆ.
ಎ ಮಂಜು ಮತ್ತು ದೇವರಾಜೇಗೌಡ ಅವರು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್ ಶುಕ್ರವಾರ ಈ ಆದೇಶ ಹೊರಡಿಸಿದೆ.
ಪ್ರಜ್ವಲ್ ರೇವಣ್ಣ ಅವರು ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಅಫಿಡವಿಟ್ ನಲ್ಲಿ ಘೋಷಿಸಿದ್ದ ಆಸ್ತಿ ವಿವರಗಳ ಕುರಿತು ಅಕ್ಷೇಪ ವ್ಯಕ್ತಪಡಿಸಿ ವಕೀಲ ದೇವರಾಜೇಗೌಡ ಎಂವರು, ಪ್ರಜ್ವಲ್ ಆಯ್ಕೆಯನ್ನ ಅಸಿಂಧುಗೊಳಿಸುವಂತೆ ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕ ಸದಸ್ಯ ಪೀಠ ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನ ಅಸಿಂಧುಗೊಳಿಸಿದೆ.
ಮುಂದಿನ ಆರು ವರ್ಷಗಳ ಕಾಲ ಅವರು ಚುನಾವಣೆಗೆ ಸ್ಪರ್ಧಿಸುವಂತಿಲ್ಲ

