ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಯಾರು ಮೈತ್ರಿ ಮಾಡಿಕೊಳ್ಳುತ್ತಾರೆ, ಯಾರು ಪ್ರತ್ಯೇಕವಾಗಿ ಚುನಾವಣೆ ಸ್ಪರ್ಧಿಸುತ್ತಾರೆ ಎನ್ನುವ ಬಗ್ಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಲೋಕಸಭಾ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತಿರುವ ಬಗ್ಗೆ ಮಾಧ್ಯಮದರೊಂದಿಗೆ ಪ್ರತಿಕ್ರಿಯಿಸಿದ ಸಿಎಂ ಯಾರು ಬೇಕಾದರೂ ಮೈತ್ರಿ ಮಾಡಿಕೊಳ್ಳಲಿ
ನಮಗೆ ಏನೂ ಆಗಬೇಕಿಲ್ಲ ಎಂದರು.
ಜನರ ಹತ್ತಿರ ಮತ ಕೇಳುತ್ತೇವೆ,ಜನ ನಮ್ಮ ಪರವಾಗಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

