ಬಿಜೆಪಿ-ಜೆಡಿಎಸ್ ಮೈತ್ರಿಗೆ ಅಮಿತ್ ಶಾ ಒಪ್ಪಿಗೆ: ಯಡಿಯೂರಪ್ಪ ಹೇಳಿಕೆ

ಬೆಂಗಳೂರು: ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಕಾ ಆದಂತಾಗಿದೆ, ಗೃಹ ಸಚಿವ ಅಮಿತ್ ಶಾ ಮೈತ್ರಿಗೆ ಒಪ್ಪಿಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಬಿಎಸ್‌ವೈ ಶುಕ್ರವಾರ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಮುಂದೆ ಬಿಜೆಪಿ-ಜೆಡಿಎಸ್ ಮೈತ್ರಿಯನ್ನು ಬಹಿರಂಗಪಡಿಸಿದರು.

ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡರೆ ಮುಂಬರುವ ಲೋಕಸಭೆ ಚುನಾವಣೆಗೆ ಸಹಕಾರಿಯಾಗಲಿದೆ ಹಾಗೂ ನಮ್ಮ ‌ಪಕ್ಷಕ್ಕೆಹೆಚ್ಚು ಶಕ್ತಿ ಬರಲಿದೆ ಎಂದಿದ್ದಾರೆ. ಅಮಿತ್ ಶಾ ಅವರು 4 ಸ್ಥಾನಗಳನ್ನು ಜೆಡಿಎಸ್ ಗೆ ಬಿಟ್ಟುಕೊಡಲು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದರು.

ರಾಜ್ಯದಲ್ಲಿ 4 ಲೋಕಸಭಾ ಸ್ಥಾನಗಳಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಈಗಾಗಲೇ ವರಿಷ್ಠರು ನಮಗೆ ದೆಹಲಿಯಿಂದ ಸೂಚನೆ ನೀಡಿದ್ದಾರೆ. ಉಭಯ ಪಕ್ಷಗಳ ವರಿಷ್ಠರ ಮಧ್ಯೆ ಮಾತುಕತೆ ನಡೆದಿದೆ ಎಂದೂ ಹೇಳಿದರು.