ವಿಚಾರಣೆ ವೇಳೆ ಕುಸಿದು ಬಿದ್ದ ಚೈತ್ರಾ ಕುಂದಾಪುರ: ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು

ಬೆಂಗಳೂರು: ಉದ್ಯಮಿಗೆ ವಂಚನೆ ಎಸಗಿದ ಪ್ರಕರಣ ಸಂಬಂಧ ಬಂಧನದಲ್ಲಿದ್ದ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶುಕ್ರವಾರ ಬೆಳಗ್ಗೆ 8 ಗಂಟೆಗೆ ಮಹಿಳಾ ಸಾಂತ್ವನ ಕೇಂದ್ರದಿಂದ ಚೈತ್ರಾಳನ್ನು ಸಿಸಿಬಿ ಕಚೇರಿಗೆ ವಿಚಾರಣೆಗೆ ಕರೆತರಲಾಗಿತ್ತು. 45 ನಿಮಿಷದ ವಿಚಾರಣೆ ಮಾಡಲಾಗಿತ್ತು ಅಷ್ಟರಲ್ಲಿ ಆಕೆ ಪ್ರಜ್ಞಾಹೀನಗೊಂಡು ಕುಸಿದು ಬಿದ್ದಿದ್ದಾಳೆ.

ಮೂರ್ಛೆ ಹೋದ ಚೈತ್ರಾಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗಿದೆ. ಸದ್ಯ ತುರ್ತು ಚಿಕಿತ್ಸಾ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಚೈತ್ರಾ ಬಾಯಿಯಲ್ಲಿ ನೊರೆ ಬಂದ ದೃಶ್ಯ ಸೆರೆಯಾಗಿದ್ದು,ಆಕೆ ಮೂರ್ಛೆ ರೋಗದಿಂದ ಬಳಲುತ್ತಿದ್ದರೆಂದು ಹೇಳಲಾಗಿದೆ.