ಮಹಿಳಾ ಮೀಸಲಾತಿ ಮಸೂದೆ:ನಮ್ಮದೆಂದ ಸೋನಿಯಾ

ನವದೆಹಲಿ: ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ‘ಮಹಿಳಾ ಮೀಸಲಾತಿ ಮಸೂದೆ ಮಂಡನೆಯಾಗಬಹುದು ಎಂಬ ಊಹಾಪೋಹಗಳ ನಡುವೆಯೇ ಕಾಂಗ್ರೆಸ್ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ, ‘ಈ ಮಸೂದೆ ನಮ್ಮದು ಎಂದು ಹೇಳಿಕೊಂಡಿದ್ದಾರೆ.

ಐದು ದಿನಗಳವರೆಗೆ ನಡೆಯಲಿರುವ ಸಂಸತ್‌ನ ವಿಶೇಷ ಅಧಿವೇಶ ಗೌರಿ ಗಣೇಶ ಹಬದ ದಿನದಂದೇ‌ ಆರಂಭಗೊಂಡಿದೆ.

ಮಂಗಳವಾರದಿಂದ ಕಲಾಪಗಳು ಹೊಸ ಸಂಸತ್‌ ಭವನದಲ್ಲಿ ನಡೆಯುತ್ತಿದೆ. ಹೊಸ ಸಂಸತ್‌ ಭವನದಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಈ ನಡುವೆ ಕಲಾಪದಲ್ಲಿ ಪಾಲ್ಗೊಳ್ಳಲು ಸಂಸತ್ತಿಗೆ ಪ್ರವೇಶಿಸುತ್ತಿದ್ದ ವೇಳೆ ಮಸೂದೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸೋನಿಯಾ ಗಾಂಧಿಯವರು, ‘ಇದು ನಮ್ಮದು, ಅಪ್ನಾ ಹೈ ಎಂದು ಹೇಳಿದ್ದಾರೆ.