ನವದೆಹಲಿ: ತಮಿಳುನಾಡಿಗೆ ನೀರು ಬಿಡಬೇಕೆಂಬ ಸಿ ಡಬ್ಲ್ಯೂ ಎಂ ಎ (CWMA) ಆದೇಶಕ್ಕೆ ನಾವು ಸುಪ್ರೀಂಕೋರ್ಟ್ ಮುಂದೆ ತಡೆಯಾಜ್ಞೆಗೆ ಮನವಿ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಎದುರಾಗಿರುವ ಸಂಕಷ್ಟ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಲು ತೆಗೆದುಕೊಳ್ಳಬೇಕಾಗಿರುವ ಕ್ರಮಗಳ ಕುರಿತು ದೆಹಲಿಯಲ್ಲಿ ನಡೆದ ಸರ್ವ ಪಕ್ಷ ಸಭೆ ನಾಯಕರು, ಕೇಂದ್ರ ಸಚಿವರು ಮತ್ತು ಲೋಕಸಭೆ, ರಾಜ್ಯಸಭೆ ಸದಸ್ಯರ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಸಿಎಂ ಮಾತನಾಡಿದರು.
ಸಂಕಷ್ಟ ಸೂತ್ರ ಇಲ್ಲದಿರುವುದರಿಂದ ಸಮಸ್ಯೆ, ಸಂಕಷ್ಟ ಹೆಚ್ಚಲು ಕಾರಣವಾಗಿದೆ,
ಕೇಂದ್ರ ಜಲ ಸಂಪನ್ಮೂಲ ಸಚಿವರ ಜತೆ ಸಂಜೆ ಸಭೆ ನಡೆಸುತ್ತಿದ್ದೇವೆ ಎಂದು ಹೇಳಿದರು.
ಎರಡೂ ರಾಜ್ಯದವರನ್ನು ಕರೆದು ಅಹವಾಲು ಕೇಳುವ ಅಧಿಕಾರ ವ್ಯಾಪ್ತಿ ಪ್ರಧಾನಿಯವರಿಗೆ ಇದೆ. ಹೀಗಾಗಿ ನಾವು ಪ್ರಧಾನಿ ಅವರ ಮಧ್ಯಪ್ರವೇಶಕ್ಕೆ ಮನವಿ ಮಾಡಿದ್ದೇವೆ ಎಂದು ಸಿದ್ದು ತಿಳಿಸಿದರು.
ಸಂಜೆ ಕೇಂದ್ರ ಜಲ ಸಂಪನ್ಮೂಲ ಸಚಿವರ ಸಭೆ ಬಳಿಕ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಹೇಳಿದರು.
177.2 TMC ನೀರು ಸಾಮಾನ್ಯ ವರ್ಷದಲ್ಲಿ, ಮಳೆ ಚೆನ್ನಾಗಿದ್ದಾಗ ನೀರು ಬಿಡಬೇಕು ಎಂದು ಹೇಳಿದೆ. ಆದರೆ ಇಂಥಾ ಸಂಕಷ್ಟದ ಸಂದರ್ಭದಲ್ಲಿ ಎಷ್ಟು ನೀರು ಬಿಡಬೇಕು ಎಂಬ ಸೂತ್ರ ಇಲ್ಲದಿರುವುದರಿಂದ ಸಮಸ್ಯೆ ಹೆಚ್ಚಾಗಿದೆ ಎಂದು ತಿಳಿಸಿದರು.
ನಮಗೆ ಕುಡಿಯುವ ನೀರಿಲ್ಲ, ಬೆಳೆ ರಕ್ಷಣೆ, ಕೈಗಾರಿಕೆಗೂ ನೀರಿಲ್ಲ. ಹೀಗಾಗಿ ನಾವು ಬಹಳ ಕಷ್ಟದಲ್ಲಿದ್ದೇವೆ.
ತಮಿಳುನಾಡು ವಾದ ವಿರೋಧಿಸಿ ಸುಪ್ರೀಂಕೋರ್ಟ್ ನಲ್ಲಿ ನಮ್ಮ ತಕರಾರು ಮಂಡಿಸಿದ್ದೇವೆ
ಒಟ್ಟು ಮೂರು ಬಾರಿ ಸರ್ವ ಪಕ್ಷ ಸಭೆ ನಡೆಸಿದ್ದೇವೆ. 5 ಸಾವಿರ ಕ್ಯೂಸೆಕ್ಸ್ ನೀರು ಬಿಡಲಾಗುತ್ತಿಲ್ಲ ಎಂದು ಸಿ ಡಬ್ಲ್ಯೂ ಎಂ ಎ
ಮುಂದೆಯೂ ಮನವಿ ಸಲ್ಲಿಸಲಿದ್ದೇವೆ ಎಂದು ಮುಖ್ಯ ಮಂತ್ರಿ ತಿಳಿಸಿದರು.
ಸಭೆಯಲ್ಲಿ ರಾಜ್ಯದಿಂದ ಆಯ್ಕೆಯಾದ ಎಲ್ಲಾ ಸಂಸದರು, ಕೇಂದ್ರ ಸಚಿವರು ಹಾಜರಿದ್ದರು.ಆದರೆ ನಿರ್ಮಲಾ ಸೀತಾರಾಮನ್ ಅವರು ಅನ್ಯಕಾರ್ಯ ನಿಮಿತ್ತ ಭಾಗವಹಿಸಿರಲಿಲ್ಲ.

