ಬೆಂಗಳೂರು: ಈ ಬಾರಿ ಮಳೆ ಅತ್ಯಂತ ಕಡಿಮೆಯಾಗಿರುವುದರಿಂದ ರೈತರಿಗೆ ತೊಂದರೆ ಆಗದಂತೆ ನೋಡಿಕೊಳ್ಳಲು ಸದ್ಯದಲ್ಲೇ ಮೋಡ ಬಿತ್ತನೆ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು.
ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದ ಬಳಿ ಸೋಮವಾರ ಡಿ.ಕೆ ಶಿವಕುಮಾರ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಮೋಡ ಬಿತ್ತನೆ ಮಾಡಲು ಒಂದೆರಡು ಮೂರು ದಿನಗಳಲ್ಲಿ ನಮ್ಮ ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹೇಳಿದರು.
ಮೋಡ ಬಿತ್ತನೆಯಿಂದ ಪರಿಸ್ಥಿತಿಗೆ ಸ್ವಲ್ಪ ಸುಧಾರಿಸಬಹುದು ಎಂಬ ನಂಬಿಕೆ ಇದೆ ಕಾವೇರಿ ನೀರು ಸಂಕಷ್ಟದ ಬಗ್ಗೆ ಚರ್ಚೆ ಮಾಡಲಿದ್ದೇವೆ ಎಂದು ಡಿಕೆಶಿ ತಿಳಿಸಿದರು.
ಬಿಜೆಪಿ ಜೆಡಿಎಸ್ ಮೈತ್ರಿಯಿಂದ ಆ ಪಕ್ಷದಲ್ಲಿ ಅಸಮಾಧಾನ ಗೊಂಡವರು ಕಾಂಗ್ರೆಸ್ ಸೇರುತ್ತಿದ್ದಾರಂತಲ್ಲಾ ಎಂಬ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿ.ಕೆ ಶಿವಕುಮಾರ್ ಇರಬಹುದು ಆದರೆ ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ನಮ್ಮ ಸಂಪುಟ
ಸಹೋದ್ಯೋಗಿಗಳೊಂದಿಗೆ ಚರ್ಚಿಸಿ ನಂತರ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

