ಬೆಂಗಳೂರು: ರಾಜ್ಯದಲ್ಲಿ ಬರಗಾಲ ಇದ್ದರೂ ತಮಿಳುನಾಡಿಗೆ ಕಾವೇರಿ ನೀರು ಹರಿಸು ವುದನ್ನು ಖಂಡಿಸಿ ಕನ್ನಡ ಪರ ಸಂಘಟನೆಗಳು ಸೆಪ್ಟೆಂಬರ್ 29 ಶುಕ್ರವಾರ ಕರೆ ನೀಡಿರುವ ಕರ್ನಾಟಕ ಬಂದ್ ಕರೆಗೆ ರಾಜ್ಯಾದ್ಯಂತ ಭಾರಿ ಬೆಂಬಲ ವ್ಯಕ್ತವಾಗುತ್ತಿದೆ.
ಕನ್ನಡ ಒಕ್ಕೂಟದ ನಾಯಕ ವಾಟಾಳ್ ನಾಗರಾಜ್,ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶಟ್ಟಿ ಬಣ,ಕನ್ನಡ ಸೇನೆ ಸೇರಿದಂತೆ ಹಲವು ಸಂಘಟನೆಗಳು ಬಂದ್ ಕರೆ ನೀಡಿವೆ.
ಬಂದ್‌ನಲ್ಲಿ ಪಾಲ್ಗೊಳ್ಳಲು ಅನೇಕ ಸಂಘಟನೆಗಳು ಮುಂದೆ ಬಂದಿವೆ, ರಾಜ್ಯದ ಅನೇಕ ಜಿಲ್ಲೆಗಳ ಸಂಘಟನೆಗಳು ಕೂಡಾ ಜೈಜೋಡಿಸಿವೆ. ಹಸಗಾಗಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಂದ್ ಯಶಸ್ವಿಯಾಗುವ ಸೂಚನೆಗಳು ಕಾಣುತ್ತಿದೆ.
ಕರ್ನಾಟಕ ಬಂದ್ ನಿಂದ ರಾಜ್ಯದ ದಕ್ಷಿಣ ಭಾಗದಲ್ಲಿ ಜನಜೀವನ ಅಸ್ತವ್ಯಸ್ತವಾಗುವುದು ಖಂಡಿತಾ,ಆದ್ದರಿಂದ
ಜನತೆ ಮನೆಯಿಂದ ಹೊರಗೆ ಬಾರದಿರುವುದು ಒಳಿತು.
ನಗರದ ಟೌನ್ ಹಾಲ್ ನಿಂದ ಫ್ರೀಡಂ ಪಾರ್ಕ್ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಅಖಂಡ ಕರ್ನಾಟಕ ಬಂದ್ ಕರೆ ನೀಡಿರುವುದರಿಂದ ಹೆದ್ದಾರಿಗಳು, ಟೋಲ್ ಗೇಟ್‌ಗಳು, ರೈಲು ಸೇವೆಗಳು ಮತ್ತು ವಿಮಾನ ನಿಲ್ದಾಣಗಳನ್ನು ಮುಚ್ಚಲು ಪ್ರಯತ್ನಿಸುತ್ತೇವೆ ಎಂದು ಅವರು ಹೇಳಿದ್ದಾರೆ.
ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಸಹ ಬಂದ್‌ಗೆ ಬೆಂಬಲ ನೀಡಿದ್ದು, ಹೋಟೆಲ್‌ಗಳು, ಆಟೋರಿಕ್ಷಾಗಳು ಬಂದ್‌ಗೆ ಬೆಂಬಲ ನೀಡಿವೆ.
ಆಟೋರಿಕ್ಷಾ ಚಾಲಕರ ಒಕ್ಕೂಟ ಮತ್ತು ಓಲಾ ಉಬರ್ ಚಾಲಕರು ಮತ್ತು ಮಾಲೀಕರ ಸಂಘ ಬಂದ್‌ಗೆ ಬೆಂಬಲ ನೀಡುತ್ತಿದೆ. ನಾವು ನಾಳೆ ನಾಯಂಡಹಳ್ಳಿಯಿಂದ ಫ್ರೀಡಂ ಪಾರ್ಕ್‌ವರೆಗೆ ಮೆರವಣಿಗೆ ನಡೆಸುತ್ತೇವೆ ಎಂದು ಅದರ ಅಧ್ಯಕ್ಷ ತನ್ವೀರ್ ಪಾಷಾ ತಿಳಿಸಿದ್ದಾರೆ.
ಬೃಹತ್ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಮುಷ್ಕರಕ್ಕೆ ನೈತಿಕ ಬೆಂಬಲ ನೀಡಿದೆ.
ರಾಜ್ಯ ಸಾರಿಗೆ ಇಲಾಖೆಯು ತಮ್ಮ ಸೇವೆಗಳನ್ನು ಎಂದಿನಂತೆ ಮುಂದುವರಿಸಲು ರಾಜ್ಯ ಸಾರಿಗೆ ನಿಗಮಗಳಿಗೆ ನಿರ್ದೇಶನ ನೀಡಿದೆ.ಉತ್ತರ ಕರ್ನಾಟಕದ ಭಾಗದ ಜಿಲ್ಲೆಗಳವರು ರೈತರು ಮತ್ತು ವರ್ತಕರು ಬಂದ್‌ಗೆ ತಮ್ಮ ನೈತಿಕ ಬೆಂಬಲವನ್ನು ವ್ಯಕ್ತಪಡಿಸಿದ್ದು ಬಂದ್ ಮಾಡುವುದಿಲ್ಲ ಎಂದು ಹೇಳಿದ್ದಾರೆ.
ಸರ್ಕಾರ ಹಾಗೂ ಜಿಲ್ಲಾಧಿಕಾರಿಗಳು ಶಾಲೆಗಳ ರಜೆ ನೀಡುವ ಬಗ್ಗೆ ನಿರ್ಧಾರಕ್ಕೆ ಮನವಿ ಮಾಡಿದ್ದೇವೆ ಎಂದು ರೂಪ್ಸಾ ಖಾಸಗಿ ಶಾಲೆಗಳ ಸಂಘಟನೆಯ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ತಿಳಿಸಿದ್ದಾರೆ
ಬೀದಿ ಬದಿ ವ್ಯಾಪಾರಿಗಳು ಕೂಡ ಬಂದ್‌ಗೆ ಸಂಪೂರ್ಣ ಬೆಂಬಲ ನೀಡಿದ್ದು ಮಾರ್ಕೆಟ್ ಮತ್ತು ಬೀದಿ ಬದಿ ವ್ಯಾಪಾರಗಳು ಸಂಪೂರ್ಣ ಸ್ಥಗಿತವಾಗಲಿದೆ ಎಂದು ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ರಂಗಸ್ವಾಮಿ ತಿಳಿಸಿದ್ದಾರೆ.
ಬೆಂಗಳೂರಿನ ಬ್ರಿಗೇಡ್ ರೋಡ್ನ ವರ್ತಕರು ಬೆಂಬಲ ಸೂಚಿಸಿದ್ದಾರೆ ಎಂದು ಬ್ರಿಗೇಡ್ ರೋಡ್ ಅಸೋಸಿಯೇಷನ್ ಅಧ್ಯಕ್ಷ ಸುಹೀಲ್ ತಿಳಿಸಿದ್ದಾರೆ
ನಾಳೆ ಹೆದ್ದಾರಿ, ರೈಲು ತಡೆದು ಚಳವಳಿ ನಡೆಸಲಾಗುವುದು ಎಂದು ಮಂಡ್ಯ ಜಿಲ್ಲಾ ರೈತ ಸಂಘದ ಅಧ್ಯಕ್ಷ ಕೆಂಪೂಗೌಡ ಹೇಳಿದ್ದಾರೆ.
ನಾಳೆ ಬೆಂಗಳೂರು ಮೆಟ್ರೋ ರೈಲು ಸಂಚಾರದಲ್ಲೂ ಕೂಡಾ ವ್ಯತ್ಯಯವಾಗಲಿದೆ.
ಆದ್ದರಿಂದ ಕಚೇರಿಗಳಿಗೆ ಹೋಗುವವರು ಮುಂಜಾಗ್ರತೆ ವಹಿಸುವುದು ಅಗತ್ಯ.

