ಕಾವೇರಿ ನೀರು ನಿರ್ವಹಣಾ ಮಂಡಳಿಗೆ ಮರುಪರಿಶೀಲನಾ ಅರ್ಜಿ ಸಲ್ಲಿಕೆ

ಬೆಂಗಳೂರು: ತಮಿಳು ನಾಡಿಗೆ ಕಾವೇರಿ ನೀರು ಬಿಡುವ ಆದೇಶಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿರ್ವಹಣಾ ಮಂಡಳಿ ಮುಂದೆ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಲಾಗಿದೆ.

ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದು ಪರಿಸ್ಥಿತಿ ಅವಲೋಕಿಸಿ ಸರ್ವೋಚ್ಛ ನ್ಯಾಯಾಲಯದ ಮುಂದೆಯೂ ಮರುಪರಿಶೀಲನಾ ಅರ್ಜಿ ಸಲ್ಲಿಸಲಾಗುವುದು ಎಂದು ಹೇಳಿದರು.

ಅವರು ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿ, ನಿನ್ನೆ ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರು, ಅಡ್ವೊಕೇಟ್ ಜನರಲ್ ಅವರೊಂದಿಗೆ ಸಭೆ ನಡೆಸಿ ಸಲಹೆಗಳನ್ನು ಪಡೆದುಕೊಂಡಿದ್ದು, ಅದರಂತೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಲಿಂಗಾಯತ ಸಮುದಾಯದ ಅಧಿಕಾರಿಗಳಿಗೆ ಗೌರವ ಸಿಗುತ್ತಿಲ್ಲ ಎಂಬ ದೂರಿನ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಲಿಂಗಾಯತ ಸಮುದಾಯಕ್ಕೆ ಸೇರಿದ ಏಳು ಸಚಿವರು ಸಚಿವಸಂಪುಟದಲ್ಲಿದ್ದಾರೆ.

ಈ ಸಮುದಾಯಕ್ಕೆ ಸೇರಿದ ಅಧಿಕಾರಿಗಳಿಗೆ ಅನ್ಯಾಯವಾಗಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಜಾತಿ ಧರ್ಮದವರಿಗೂ ಅನ್ಯಾಯವಾಗುವುದಿಲ್ಲ ಎಂದು ತಿಳಿಸಿದರು.