ಕೇಂದ್ರತಂಡಕ್ಕೆರಾಜ್ಯದಬರ-ಕೃಷಿವಾಸ್ತವಾಂಶವಿವರಿಸಿದಸಿಎಂಸಿದ್ದರಾಮಯ್ಯ

ಬೆಂಗಳೂರು: ರಾಜ್ಯದ ರೈತರ ರಕ್ಷಣೆಗೆ ಪೂರಕವಾಗಿ ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ಬರ ಅಧ್ಯಯನ ತಂಡಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮುಖ್ಯಮಂತ್ರಿಗಳು ಗುರುವಾರ ತಮ್ಮನ್ನು ಭೇಟಿಯಾದ ಕೇಂದ್ರ ಬರ ಅಧ್ಯಯನ ತಂಡದೊಂದಿಗೆ ಮಾತುಕತೆ ನಡೆಸಿ, ರಾಜ್ಯದ ರೈತರ ರಕ್ಷಣೆಗೆ ಪೂರಕವಾಗಿ ಕ್ರಮ ಕೈಗೊಳ್ಳುವಂತೆ ಸಲಹೆ ನೀಡಿದರು.

ವೇಳೆ ರಾಜ್ಯದ ಬರ ಪರಿಸ್ಥಿತಿಯನ್ನು ವಿವರಿಸಿದ ಸಿದ್ದರಾಮಯ್ಯ, ಕೇಂದ್ರದ ಮಾರ್ಗಸೂಚಿಯನ್ವಯ 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ನೈಋತ್ಯ ಮುಂಗಾರು ವಿಳಂಬ ಹಾಗೂ ಮಳೆ ಕೊರತೆಯಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ರಾಜ್ಯದಲ್ಲಿ ಶೇ. 90 ರಷ್ಟು ಬಿತ್ತನೆ ಆಗಿದ್ದು, ಅದರಲ್ಲಿ 42 ಲಕ್ಷ ಹೆಕ್ಟೇರ್ಗೂ ಹೆಚ್ಚು ಪ್ರದೇಶದಲ್ಲಿ ಬೆಳೆಹಾನಿಯಾಗಿದೆ ಎಂದು ಸಿಎಂ ವಿವರಿಸಿದರು.

ರೈತರ ಜಮೀನಿನಲ್ಲಿ ಹಸಿರು ಕಾಣಿಸಿದರೂ ಬೆಳೆ ಬಾರದ ಪರಿಸ್ಥಿತಿ ಇದೆ ರಾಜ್ಯದಲ್ಲಿ ಹಸಿರು ಬರ ತಲೆದೋರಿದೆ ಎಂದು ವಾಸ್ತವ ಸ್ಥಿತಿಯನ್ನು ಕೇಂದ್ರ ತಂಡಕ್ಕೆ ತಿಳಿಸಿದರು.

ಪ್ರವಾಸದ ಸಂದರ್ಭದಲ್ಲಿ ರಾಜ್ಯದ ವಸ್ತುಸ್ಥಿತಿಯನ್ನು ಅರಿತು ಕೇಂದ್ರಸರ್ಕಾರಕ್ಕೆ ಮನವರಿಕೆ ಮಾಡುವ ಮೂಲಕ ರೈತರ ಸಂಕಷ್ಟಕ್ಕೆ ತ್ವರಿತವಾಗಿ ಸ್ಪಂದಿಸಬೇಕೆಂದು ಸಿದ್ದು ಮನವಿ ಮಾಡಿದರು.

ಕೊಡಗು ಜಿಲ್ಲೆಯಲ್ಲಿ ಮಳೆ ಕೊರತೆಯಿಂದಾಗಿ ಕೆ.ಆರ್.ಎಸ್. ಅಣೆಕಟ್ಟಿನಲ್ಲಿ ನೀರಿನ ಮಟ್ಟ ಕಡಿಮೆಯಾಗಿದೆ. ಕುಡಿಯುವ ನೀರಿಗಾಗಿಯೇ ರಾಜ್ಯಕ್ಕೆ 33 ಟಿಎಂಸಿ ನೀರಿನ ಅವಶ್ಯಕತೆಯಿದೆ. ಆದರೆ ಮಳೆಯ ಕೊರತೆಯಿಂದ ಆತಂಕದ ಸ್ಥಿತಿ ಎದುರಾಗಿದೆ ಜತೆಗೆ ವಿದ್ಯುತ್ ಅಭಾವವೂ ತಲೆದೋರಲಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಸಣ್ಣ ಮತ್ತು ಮಧ್ಯಮ ರೈತರ ಸಂಖ್ಯೆ ಹೆಚ್ಚಿದ್ದು, ಇವರ ದತ್ತಾಂಶವನ್ನು ಫ್ರೂಟ್ಸ್ತಂತ್ರಾಂಶದಲ್ಲಿ ಸಂಗ್ರಹಿಸಲಾಗಿದೆ. ಜೊತೆಗೆ ಬೆಳೆ ಸಮೀಕ್ಷೆಯನ್ನು ಸಹ ಡಿಜಿಟೈಸ್ಮಾಡಿರುವುದರಿಂದ ನಿಖರ ಮಾಹಿತಿ ದೊರೆಯುವುದು.

ರೈತರಿಗೆ ಎನ್.ಡಿ.ಆರ್.ಎಫ್. ಮಾರ್ಗ ಸೂಚಿಯಲ್ಲಿ ನಿಗದಿ ಪಡಿಸಿರುವ ಬೆಳೆ ನಷ್ಟ ಪರಿಹಾರ ಅತ್ಯಂತ ಕಡಿಮೆಯಿದ್ದು, ಹೆಚ್ಚಿಸುವ ಅಗತ್ಯವಿದೆ. ರಾಜ್ಯದಲ್ಲಿ ಹೆಚ್ಚುವರಿಯಾಗಿ ಬೆಳೆ ನಷ್ಟ ಪರಿಹಾರ ನೀಡಲಾಗುತ್ತಿದೆ ಎಂದು ತಿಳಿಸಿದರು.

ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಕಂದಾಯ ಇಲಾಖೆ ಕಾರ್ಯದರ್ಶಿ ರಶ್ಮಿ ವಿ. ಮಹೇಶ್‌, ಕೇಂದ್ರ ತಂಡದ ಮುಖ್ಯಸ್ಥ ಅಜಿತ್ಕುಮಾರ್ಸಾಹು ಹಾಗೂ ತಂಡದ ಸದಸ್ಯರು ಉಪಸ್ಥಿತರಿದ್ದರು.