ದಸರಾ ಏರ್ ಶೋ:  ಸ್ಧಳ ಪರಿಶೀಲಿಸಿದ ಜಿಲ್ಲಾಧಿಕಾರಿ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಜನರನ್ನು ಆಕರ್ಷಿಸುವ ಏರ್‌ ಶೋ ಆಯೋಜನೆಗೆ ಅನುಮತಿ ನೀಡುವಂತೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸಿದ್ದು,ಈ ಬಾರಿ ಸಾಂಸ್ಕೃತಿಕ ನಗರಿಯಲ್ಲಿ ಲೋಹದ‌ ಹಕ್ಕಿಗಳ ಹಾರಾಟ ಮೇಳೈಸಲಿದೆ.

ಏರ್ ಶೋ ನಡೆಸಲು ಕೇಂದ್ರ ಸರ್ಕಾರ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ಅವರು ಬನ್ನಿಮಂಟಪ ಮೈದಾನಕ್ಕೆ ಭೇಟಿ ನೀಡಿ ಸ್ಧಳ ಹಾಗೂ ಏರ್ ಶೋ ನಡೆಸಲು ಬೇಕಾದ ರೂಪುರೇಷೆಗಳನ್ನು ಪರಿಶೀಲನೆ ನಡೆಸಿದರು.

ಮೈಸೂರು ಏರ್ ಬೇಸ್ಡ್ ಗ್ರೂಪ್ ಕ್ಯಾಪ್ಟನ್ ಡಿ.ಕೆ.ಹೋಜಾ ಅವರೊಂದಿಗೆ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು ಏರ್ ಶೋ ನಡೆಸುವ ಸ್ಧಳ  ದಿನಾಂಕ ಕುರಿತು ಚರ್ಚಿಸಿದರು.