ಗ್ಯಾರಂಟಿ ಯೋಜನೆಗಳಿಗೆ ಯಾವುದೇ ತೊಂದರೆ ಇಲ್ಲ:ಸಿದ್ದರಾಮಯ್ಯ ಭರವಸೆ

ಮೈಸೂರು: ಗ್ಯಾರಂಟಿ ಯೋಜನೆಗಳಿಗೆ ಯಾವುದೇ ತೊಂದರೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ

ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಿಎಂ ಮಾತನಾಡಿದರು.

ರಾಜ್ಯ ಸರ್ಕಾರ ಈಗ ನೀಡುತ್ತಿರುವ ಯಾವುದೇ ಗ್ಯಾರಂಟಿ ಯೋಜನೆಗಳಿಗೆ ಆರ್ಥಿಕ ಸಮಸ್ಯೆ ಇಲ್ಲ, ಎಲ್ಲವೂ ಸರಾಗವಾಗಿ ನಡೆಯಲಿದೆ, ಎಲ್ಲವನ್ನು ಜಾರಿಗೊಳಿಸುತ್ತೇವೆ ಎಂದು ಭರವಸೆ ನೀಡಿದರು.

ರಾಜ್ಯದಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು ಕೇಂದ್ರ ಸರ್ಕಾರಕ್ಕೆ 4,860 ಕೋಟಿ ರೂ ಬರ ಪರಿಹಾರಕ್ಕಾಗಿ ಮನವಿ ಮಾಡಲಾಗಿದೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರ ಮೂರು ತಂಡಗಳನ್ನು ರಾಜ್ಯಕ್ಕೆ ಕಳುಹಿಸಿದ್ದು ಪ್ರದೇಶಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿ ಕೇಂದ್ರ ಸರ್ಕಾರಕ್ಕೆ ವರದಿಯನ್ನು ನೀಡಲಿದ್ದಾರೆ ಆನಂತರ ಕೇಂದ್ರ ಸರ್ಕಾರ ತಜ್ಞರು ನೀಡಿದ ವರದಿಯನ್ನು ನೋಡಿಕೊಂಡು ಹಣವನ್ನು ಬಿಡುಗಡೆ ಮಾಡಲಿದೆ ಸಿಎಂ ತಿಳಿಸಿದರು.

ನಮ್ಮಲ್ಲಿ ಮೊದಲಿನಿಂದಲೂ ಜಾತಿ ವ್ಯವಸ್ಥೆ ಇದೆ, ಇದರ ಆಧಾರದ ಮೇಲೆ ಸಾಮಾಜಿಕ ಆರ್ಥಿಕ ಸಮಾನತೆಯನ್ನು ತರುವ ನಿಟ್ಟಿನಲ್ಲಿ ಜಾತಿ ಜನ ಗಣತಿಯನ್ನು ನಡೆಸಿ ಯಾರು ಕಳೆದ 70 ವರ್ಷಗಳಿಂದಲೂ ಹಿಂದುಳಿದಿದ್ದಾರೆ ಅಂತವರನ್ನು ಮುಖ್ಯ ವಾಹಿನಿಗೆ ತರುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗಲೇ ಕಾಂತರಾಜು ಅವರು ಕರ್ನಾಟಕ ಜಾತಿ ವ್ಯವಸ್ಥೆ ಬಗ್ಗೆ ನೀಡಿದ್ದ ವರದಿಯನ್ನು ಸ್ವೀಕರಿಸಲಿಲ್ಲ ಹಾಗಾಗಿ ಈಗ ಬೇರೆಯವರು ಅಧ್ಯಕ್ಷರಾಗಿದ್ದಾರೆ ನಾನು ಅವರಿಗೆ ಹೇಳಿದ್ದೇನೆ ಆದಷ್ಟು ಬೇಗ ವರದಿ ನೀಡುವಂತೆ ತಿಳಿಸಿದ್ದೇನೆ ಅವರು ನವೆಂಬರ್ ನಲ್ಲಿ ವರದಿಯನ್ನು ಕೊಡುವುದಾಗಿ ತಿಳಿಸಿದ್ದಾರೆ ಎಂದು ಹೇಳಿದರು.

ರಾಜ್ಯದಲ್ಲಿ ಎಲ್ಲಿಯೂ ಹೊಸದಾಗಿ ಮಧ್ಯದಂಗಡಿ ತೆರೆಯಲು ಹೊಸ ರಹದಾರಿ ನೀಡುವುದಿಲ್ಲ ಎಂದು ಸಿದ್ದರಾಮಯ್ಯ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಮೈಸೂರಿನಲ್ಲಿ ಮಹಿಷ ದಸರಾ ಕುರಿತು ಕೇಳಿದ ಪ್ರಶ್ನೆಗೆ ಹಿಂದೆಯೂ ಮಹಿಷ ದಸರ ಮಾಡಿದ್ದರು ಆದರೆ ಬೆಟ್ಟದಲ್ಲಿ ಮಾಡಿರಲಿಲ್ಲ ಈ ಕುರಿತು ಜಿಲ್ಲಾಡಳಿತ ಸೂಕ್ತ ನಿರ್ಧಾರವನ್ನು ಕೈಗೊಳ್ಳಲಿದೆ ಎಂದು ಸಿಎಂ ತಿಳಿಸಿದರು