ಮೈಸೂರು: ಅತ್ತಿಬೆಲೆಯಲ್ಲಿ ನಡೆದ ಅಗ್ನಿ ದುರಂತದ ಹಿನ್ನೆಲೆಯಲ್ಲಿ ಗೋದಾಮಿನ ಮಾಲೀಕರ ಮೇಲೆ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಸಿಎಂ ಭಾನುವಾರ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ದುರಂತದಲ್ಲಿ 14 ಜನ ಮೃತಪಟಿದ್ದು, ಪಟಾಕಿ ಗೋದಾಮಿನಲ್ಲಿ ಮುನ್ನೆಚ್ಚರಿಕೆ ಹಾಗೂ ಸುರಕ್ಷಾ ಕ್ರಮಗಳನ್ನು ಕೈಗೊಂಡಿದ್ದರೆ ಎಂಬುದನ್ನು ಪರಿಶೀಲಿಸಿ ನಂತರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
ಕೇಂದ್ರ ಬರ ಅಧ್ಯಯನ ತಂಡ ಕಾಟಾಚಾರಕ್ಕೆ ಅಧ್ಯಯನ ಮಾಡುತ್ತಿದ್ದಾರೆ ಎಂದು ರೈತರು ಆರೋಪಿಸಿದ್ದಾರಲ್ಲಾ ಎಂಬ ಪ್ರಶ್ನೆಗೆ ವಸ್ತುಸ್ಥಿತಿಯನ್ನು ಕೇಂದ್ರ ಸರ್ಕಾರಕ್ಕೆ ವರದಿ ಮಾಡಲು ತಂಡಕ್ಕೆ ತಿಳಿಸಲಾಗಿದೆ ಎಂದು ಸಿದ್ದರಾಮಯ್ಯ ಉತ್ತರಿಸಿದರು.

