ಬೆಂಗಳೂರು: ಬೆಂಗಳೂರಿನಲ್ಲಿ 10ಕ್ಕೂ ಹೆಚ್ಚು ಕಡೆ ಆದಾಯ ತೆರಿಗೆ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿ ಚಿನ್ನದ ವ್ಯಾಪಾರಿಗಳಿಗೆ ಶಾಕ್ ನೀಡಿದ್ದಾರೆ.
ತೆರಿಗೆ ವಂಚನೆ ಆರೋಪದ ಮೇಲೆ ಗುರುವಾರ ಬೆಳ್ಳಂಬೆಳಗ್ಗೆ ಬೆಂಗಳೂರಿನ 10ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳ ದಾಳಿ ಮಾಡಿದ್ದಾರೆ.
ಮಲ್ಲೇಶ್ವರಂ, ಸದಾಶಿವನಗರ, ಡಾಲರ್ಸ್ ಕಾಲೋನಿ, ಮತ್ತಿಕೆರೆ, ಸರ್ಜಾಪುರ ರಸ್ತೆ, ಬಿಇಎಲ್ ವೃತ್ತ ಮತ್ತಿತರೆಡೆ ಚಿನ್ನದ ವ್ಯಾಪಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪತ್ರವನ್ನು ಪರಿಶೀಲನೆ ನಡೆಸಿದ್ದಾರೆ.
ಕಾಫಿ ಬೋರ್ಡ್ ನಿರ್ದೇಶಕ ಚಂದ್ರಶೇಖರ್ ನಿವಾಸದ ಮೇಲೂ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಅಕ್ಟೋಬರ್ 06ರಂದು ಕೂಡಾ ಬೆಂಗಳೂರಿನಲ್ಲಿ 10ಕ್ಕೂ ಹೆಚ್ಚು ಕಡೆ ಐಟಿ ಖಾಸಗಿ ಕಂಪನಿಗಳು, ಅದರ ಮಾಲೀಕರು ಹಾಗೂ ಚಿನ್ನದ ವ್ಯಾಪಾರಿಗಳ ಮನೆಗಳ ಮೇಲೆ ದಾಳಿ ಅಧಿಕಾರಿಗಳು ದಾಳಿ ಮಾಡಿದ್ದನ್ನು ಸ್ಮರಿಸಬಹುದು.

