ರಂಗೋಲಿಯಲ್ಲಿ ಮೂಡಿ ಬಂದ ಸರ್ಕಾರದ ಪಂಚ ಗ್ಯಾರಂಟಿಗಳು

ಮೈಸೂರು: ರಾಜ್ಯ ಮಹಿಳೆಯರಿಗೆ ವಿಶೇಷ ಆಧ್ಯತೆಗಳನ್ನು ನೀಡಿ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು ನೀಡಿರುವ ಸಿದ್ದರಾಮಯ್ಯ ಸರ್ಕಾರದ ಪಂಚ ಗ್ಯಾರಂಟಿಗಳನ್ನು ರಂಗೋಲಿಯಲ್ಲಿ ಬಿಡಿಸಿ ವನಿತೆಯರು ಪ್ರಶಂಸಿದರು.

ಮಹಿಳಾ ಮತ್ತು ಮಕ್ಕಳ ಉಪ ಸಮಿತಿ ಸೋಮವಾರ ಅರಮನೆ ಆವರಣದಲ್ಲಿ ಎಲ್ಲಾ ವರ್ಗದ ಮಹಿಳೆಯರಿಗಾಗಿ ರಂಗೋಲಿ ಸ್ಪರ್ಧೆ ಆಯೋಜಿಸಿದ್ದು ರಾಜ್ಯದ ವಿವಿಧ ಜಿಲ್ಲೆಗಳಿಂದ ಮಹಿಳೆಯರು ಭಾಗವಹಿಸಿ ಬಣ್ಣ ಬಣ್ಣದ ರಂಗೋಲಿ ಬಿಡಿಸಿ ಸಂಭ್ರಮಿಸಿದರು.

ಚಾಮುಂಡೇಶ್ವರಿ ದೇವಿ, ಆನೆ, ನವಿಲು, ಮಹಿಳೆ, ರೈತ, ವಿಶೇಷವಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಗ್ಯಾರಂಟಿಗಳು ಸೇರಿದಂತೆ ವಿವಿಧ ವಿನ್ಯಾಸಗಳ ಚಿತ್ತಾರ ಅಲ್ಲಿ ಮೂಡಿ ಬಂದಿತ್ತು.

ಈ ಸಾಲಿನ ರಂಗೋಲಿ ಸ್ಪರ್ಧೆಯಲ್ಲಿ 100 ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ್ದರು.

ಸ್ಪರ್ಧೆಯಲ್ಲಿ ಮೂರು ಬಹುಮಾನ, ಮೂರು ಸಮಾಧಾನಕರ ಬಹುಮಾನ ಮತ್ತು ಭಾಗವಹಿಸಿದವರೆಲ್ಲರಿಗೂ ಪ್ರಶಸ್ತಿ ಪತ್ರವನ್ನು ಅ.20 ರಂದು ನೀಡಲಾಗುವುದು.

ಕಾರ್ಯಕ್ರಮದಲ್ಲಿ ಹುಣಸೂರು ಉಪವಿಭಾಗಧಿಕಾರಿ ರುಚಿ ಬಿಂದಾಲ್ ಮತ್ತು ಮಹಿಳಾ ಮತ್ತು ಮಕ್ಕಳ ಇಲಾಖೆಯ ಉಪ ನಿರ್ದೇಶಕರಾದ ಬಸವರಾಜು ಹಾಜರಿದ್ದರು.