ಬೆಂಗಳೂರು: ಐಟಿ ದಾಳಿ ವೇಳೆ ಪತ್ತೆಯಾದ ಹಣ ಕಾಂಗ್ರೆಸ್ ನಾಯಕರಿಗೆ ಸೇರಿದ್ದಾಗಿದೆ ಈ ಕುರಿತು ಸಿಬಿಐ ತನಿಖೆ ಆಗಬೇಕು ಎಂದು ಮಾಜಿ ಸಚಿವ ಆರ್.ಅಶೋಕ್ ಆಗ್ರಹಿಸಿದರು.
ಬೆಂಗಳೂರಿನಲ್ಲಿ ಮಂಗಳವಾರ ಮಾಧ್ಯಮಗಳ ಜೊತೆ ಮಾತನಾಡಿದ ಅಶೋಕ್, ಎರಡು ರಾಜ್ಯಗಳ ಚುನಾವಣೆಗೆ ಇಲ್ಲಿಂದ ಹಣ ಕಳಿಸಲಾಗಿದೆ, ಕಾಂಗ್ರೆಸ್ ಸರ್ಕಾರ ಎಟಿಎಂ ಸರ್ಕಾರವಾಗಿದ್ದು, ರಾಜ್ಯದಲ್ಲಿ ಲೂಟಿ ಮಾಡುತ್ತಿದೆ ಎಂದು ಆರೋಪಿಸಿದರು.
ಐಟಿ ದಾಳಿ ವೇಳೆ ಪತ್ತೆಯಾದ ಹಣ ಕಾಂಗ್ರೆಸ್ ಗೆ ಸೇರಿದ್ದು. ಹೀಗಾಗಿ ಹಣದ ಮೂಲದ ತನಿಖೆಯನ್ನ ಸಿಬಿಐಗೆ ವಹಿಸಬೇಕು ಇದರ ಹೊಣೆ ಹೊತ್ತು ಮುಖ್ಯ ಮಂತ್ರಿ ಸಿದ್ಧರಾಮಯ್ಯ ಹಾಗೂ ಉಪ ಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ತಕ್ಷಣ ರಾಜೀನಾಮೆ ನೀಡಬೇಕು ಎಂದು ಆರ್.ಅಶೋಕ್ ಆಗ್ರಹಿಸಿದರು.

