ರಾಜ್ಯ ಮಟ್ಟದ ಚಿತ್ರ ಬಿಡಿಸುವ ಸ್ಪರ್ಧೆ: ಸಚಿವ ಮಹದೇವಪ್ಪ ಚಾಲನೆ

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ಲಲಿತಕಲೆ ಮತ್ತು ಕರಕುಶಲ ಉಪ ಸಮಿತಿ ವತಿಯಿಂದ ಮಕ್ಕಳಿಗಾಗಿ ರಾಜ್ಯ ಮಟ್ಟದ ಚಿತ್ರ ಬಿಡಿಸುವ ಸ್ಪರ್ಧೆ ಏರ್ಪಡಿಸಿದ್ದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ.ಮಹದೇವಪ್ಪ ಕಲಾಮಂದಿರದಲ್ಲಿ ಉದ್ಘಾಟಿಸಿದರು.

ಚಿತ್ರಕಲಾ ಸ್ಪರ್ಧೆಯಲ್ಲಿ ಒಟ್ಟು 325 ವಿದ್ಯಾರ್ಥಿಗಳು ಭಾಗವಹಿಸಿದ್ದು ಅದರಲ್ಲಿ 1ರಿಂದ 4ನೇ ತರಗತಿ ವಿದ್ಯಾರ್ಥಿಗಳು 110 ಜನ, ಮತ್ತು 5ರಿಂದ 7ನೇ ತರಗತಿ ವಿದ್ಯಾರ್ಥಿಗಳು 111ಮಂದಿ, 8ರಿಂದ 10ನೇ ತರಗತಿ ವಿದ್ಯಾರ್ಥಿಗಳು 104 ಜನ ಭಾಗವಹಿಸಿದ್ದಾರೆ.

1 ರಿಂದ 4ನೇ ತರಗತಿ ವಿದ್ಯಾರ್ಥಿಗಳಿಗೆ ಪರಿಸರ, ಪ್ರಾಣಿ, ಪಕ್ಷಿಗಳು,ಮೈಸೂರು ದಸರಾದ, ವಿಷಯ ಕುರಿತು ಚಿತ್ರ ಬಿಡಿಸುವ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.

5 ರಿಂದ 7ನೇ ತರಗತಿ ವಿದ್ಯಾರ್ಥಿಗಳಿಗೆ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಭಾರತದ ಮೈಲುಗಲ್ಲು ವಿಷಯದ ಕುರಿತು ಚಿತ್ರ ಬಿಡಿಸುವ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.

8 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಕರ್ನಾಟಕದಲ್ಲಿ ವಿಶ್ವ ಪಾರಂಪರಿಕ ತಾಣಗಳ ವಿಷಯ ಕುರಿತು ಚಿತ್ರ ಬಿಡಿಸುವ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.

ಚಿತ್ರಕಲೆ ಸ್ಪರ್ಧೆಯಲ್ಲಿ ವಿಜೇತರಾದವರಿಗೆ‌‌ ಅ. 22 ರಂದು ಬಹುಮಾನ ವಿತರಿಸಲಾಗುವುದು ಎಂದು ಆಯೋಜಕರು‌ ತಿಳಿಸಿದ್ದಾರೆ.