ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸಂಚಲನ ಸೃಷ್ಟಿಸಿದ ಹೆಚ್.ಸಿ ಮಹದೇವಪ್ಪ ಹೇಳಿಕೆ

ಬೆಂಗಳೂರು: ಸಿದ್ಧರಾಮಯ್ಯ ಅವರ ಆಪ್ತವಲಯದ ಸಚಿವರಾದ ಹೆಚ್.ಸಿ ಮಹದೇವಪ್ಪ ಅವರು 5 ವರ್ಷವೂ‌ ಸಿದ್ದು ಮುಖ್ಯಮಂತ್ರಿಯಾಗಿರುತ್ತಾರೆ ಸಿಎಂ ಬದಲಾವಣೆ ಇಲ್ಲ ಎಂದು ಹೇಳುವ‌ ಮೂಲಕ
ಸಂಚಲನ ಉಂಟು ಮಾಡಿದ್ದಾರೆ.

ಬೆಂಗಳೂರಿನಲ್ಲಿ ಶನಿವಾರ ಮಾಧ್ಯಮಗಳ ಜೊತೆ ಮಾತನಾಡಿದ ಮಹದೇವಪ್ಪ, ಸಿಎಂ ಆಗಿ ಸಿದ್ಧರಾಮಯ್ಯ ಐದು ವರ್ಷ ಇರುತ್ತಾರೆ. ಬದಲಾಗಲ್ಲ ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ ಎಂದು ಹೇಳಿದರು.

ಗೃಹ ಸಚಿವ ಪರಮೇಶ್ವರ್ ರನ್ನು ಸಿಎಂ ಮಾಡುವುದಿಲ್ಲ ಎಂದು ಹೇಳಿದ್ದು ಮತ್ತೆ ರಾಜ್ಯ ಕಾಂಗ್ರೆಸ್ ನಲ್ಲಿ ಯಾವುದೂ ಸರಿಯಿಲ್ಲ ಎಂಬುದನ್ನು ತೋರಿಸಿದೆ.

ಬಿಜೆಪಿಯಿಂದ ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರೂ ಆಫರ್ ವಿಚಾರ ಸಂಬಂಧ ಪ್ರತಿಕ್ರಿಯಿಸಿದ ಮಹದೇವಪ್ಪ, ಬೋಗಿ ಅಲ್ಲಾಡುತ್ತೆ ಅಷ್ಟೆ,ಹಾಗಂತ ಟ್ರೈನ್ ಉರುಳೋದಿಲ್ಲ ಎಂದರು.