ಬೆಂಗಳೂರು: ಇಂದಿರಾಗಾಂಧಿ ಅವರಂಥಾ ಜನಪರ-ಜನಪ್ರಿಯ ಪ್ರಧಾನಮಂತ್ರಿ ಮತ್ತೆ ಯಾರೂ ಬಂದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ 39 ನೇ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಸಿಎಂ ಮಾತನಾಡಿದರು.
ಇಂಧಿರಾಗಾಂಧಿ ಅತ್ಯಂತ ಧೈರ್ಯವಂತ ಮಹಿಳೆ.ಬಡವರಿಗೆ ಬದುಕು ಕೊಟ್ಟ ಧೈರ್ಯವಂತೆ, ದೇಶದ ಬಡವರ ಆರಾಧ್ಯ ದೈವ ಆಗಿದ್ದರು ಎಂದು ಬಣ್ಣಿಸಿದರು
ಮಹಾತ್ಮಗಾಂಧಿ ಹತ್ಯೆ, ಇಂದಿರಾಗಾಂಧಿ ಹತ್ಯೆ, ರಾಜೀವ್ ಗಾಂಧಿ ಹತ್ಯೆ ದೇಶಕ್ಕೆ ಆದ ದೊಡ್ಡ ನಷ್ಟ. ಈ ಮೂವರು ದೇಶಕ್ಕಾಗಿ ಹುತಾತ್ಮರಾದರು. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದರು.ಅವರ ತ್ಯಾಗ, ಬಲಿದಾನ ನಮ್ಮ ದೇಶದ ಮಣ್ಣಿನಲ್ಲಿ ದಾಖಲಾಗಿದೆ ಎಂದು ತಿಳಿಸಿದರು
ಬಿಜೆಪಿಯವರಿಗೆ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಚರಿತ್ರೆ ಇಲ್ಲ. ಕೇವಲ ಖಾಲಿ ದೇಶಭಕ್ತಿ ಬಗ್ಗೆ ಭಾಷಣ ಮಾಡುತ್ತಾರೆ. ಖಾಲಿ ಭಾಷಣಗಳಿಂದ ದೇಶಕ್ಕೆ, ದೇಶದ ಜನರಿಗೆ ಏನೂ ಸಿಗುವುದಿಲ್ಲ ಎಂದು ಟೀಕಿಸಿದರು.
ಇಂದು ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮದಿನ. ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಇವರ ಕೊಡುಗೆ ಅಪಾರ ಎಂದು ಅವರ ಹೋರಾಟದ ಘಟನೆಗಳನ್ನು ಸಿದ್ದರಾಮಯ್ಯ ಸ್ಮರಿಸಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಪಕ್ಷದ ಮುಖಂಡರು ಪಾಲ್ಗೊಂಡಿದ್ದರು.

