ಬೆಂಗಳೂರು: ಮುಖ್ಯ ಮಂತ್ರಿಗಳ ಕಾವೇರಿ ನಿವಾಸದಲ್ಲಿ ಶನಿವಾರ ಸಚಿವರ ಜೊತೆ ಸಿಎಂ ಸಿದ್ದರಾಮಯ್ಯ ಬ್ರೇಕ್ಫಾಸ್ಟ್ ಮೀಟಿಂಗ್ ಆಯೋಜಿಸಿದ್ದರು.
ಉಪಾಹಾರಕೂಟದಲ್ಲಿ ಉಪ ಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್, ಸಚಿರಾದ ಡಾ.ಜಿ.ಪರಮೇಶ್ವರ್, ಜಮೀರ್ ಅಹ್ಮದ್ ಖಾನ್, ದಿನೇಶ್ ಗುಂಡೂರಾವ್, ರಾಮಲಿಂಗಾರೆಡ್ಡಿ, ಎಂ.ಬಿ ಪಾಟೀಲ್, ಕೃಷ್ಣ ಭೈರೇಗೌಡ,ಸಂತೋಷ್ ಲಾಡ್, ಬೋಸರಾಜು ಸೇರಿ 15 ಸಚಿವರು ಭಾಗಿಯಾಗಿದ್ದರು.
ಬ್ರೇಕ್ ಫಾಸ್ಟ್ ಮೀಟಿಂಗ್ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದು, ಪ್ರಸಕ್ತ ರಾಜಕೀಯ ಬೆಳವಣಿಗೆ, ಲೋಕಸಭಾ ಚುನಾವಣೆ ಬಗ್ಗೆ ಉಪಾಹಾರ ಕೂಟದಲ್ಲಿ ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.ಇದೇ ಸಂದರ್ಭದಲ್ಲಿ ಕಾವೇರಿ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಸಭಾಂಗಣವನ್ನು ಸಿಎಂ ಸಿದ್ದರಾಮಯ್ಯ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರಿಂದ ಉದ್ಘಾಟನೆ ಮಾಡಿಸಿದ್ದು ವಿಶೇಷ.

