ಭೂವಿಜ್ಞಾನ ಇಲಾಖೆ ಅಧಿಕಾರಿ ಪ್ರತಿಮಾ ಹತ್ಯೆ ಕೇಸ್‌: ಮಾಜಿ‌ ಕಾರು ಚಾಲಕ ಪೊಲೀಸ್ ವಶಕ್ಕೆ

ಬೆಂಗಳೂರು: ಗಣಿ-ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪ್ರತಿಮಾ ಅವರ ಹತ್ಯೆ ಪ್ರಕರಣ ಸಂಬಂಧ ಪೊಲೀಸರು ಆಕೆಯ ಹಿಂದಿನ ಕಾರು ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

ಕಿರಣ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು. ವಿಚಾರಣೆಗೆ ಒಳಪಡಿಸಿದ್ದಾರೆ.

ಈ ಹಿಂದೆ ಪ್ರತಿಮಾ ಕಾರು ಚಾಲಕನಾಗಿದ್ದ ಕಿರಣ್ ಎಂಬಾತನನ್ನು ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹಲವು ವರ್ಷಗಳಿಂದ ಕಾರು ಚಾಲಕನಾಗಿದ್ದ ಕಿರಣ್​ನನ್ನು ಪ್ರತಿಮಾ ಅವರು ತೆಗೆದುಹಾಕಿದ್ದರು. ಕೆಲಸದಿಂದ ತೆಗದುಹಾಕಿದ್ದಕ್ಕೆ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ ‌

ಕಿರಣ್ ಕಳೆದ ಐದು ವರ್ಷಗಳಿಂದ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ.ಕೆಲಸದಿಂದ ತೆಗೆದುದಕ್ಕೆ ಕೋಪಗೊಂಡಿದ್ದ.